ಬೆಂಗಳೂರು : ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ಸಿಕ್ಕಿದೆ. ಶಿರಸಿ ವಿಜಯಪುರದ ಪ್ರತಿಷ್ಠಿತ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಲಿಮಿಟೆಡ್ ನಲ್ಲಿ (Shri Shiddeshwar Cooperative Bank Ltd Recruitment 2026) ಖಾಲಿ 60 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಲಿಮಿಟೆಡ್
ಹುದ್ದೆಗಳ ಹೆಸರು: ಮ್ಯಾನೇಜರ್ ಇತ್ಯಾದಿ
ಒಟ್ಟು ಹುದ್ದೆಗಳು: 60
ಉದ್ಯೋಗ ಸ್ಥಳ: ಶಿರಸಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಸೆಪ್ಟೆಂಬರ್ 15
ಮ್ಯಾನೇಜರ್, ಜೂನಿಯರ್ ಅಸಿಸ್ಟಂಟ್, ವಾಚ್ ಮನ್, ಸಿಪಾಯಿ ಹಾಗೂ ವಾಹನ ಚಾಲಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಸ್ನಾತಕೋತ್ತರ ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳಿಗೆ 45 ವರ್ಷಗಳಿಂದ ಗರಿಷ್ಠ 65 ವರ್ಷಗಳ ಮಿತಿಯನ್ನು ನಿಗದಿಪಡಿಸಲಾಗಿದೆ.
ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 14,450 ರೂಪಾಯಿಯಿಂದ 43,200 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು https://www.shiddeshwarbank.com/ ವೆಬ್ ಸೈಟ್ ಗೆ ಭೇಟಿ ನೀಡಿ ಅಧಿಸೂಚನೆ ಓದಿಕೊಳ್ಳಬೇಕು. ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು.
ಇದನ್ನೂ ಓದಿ : ರಾಜ್ಯ ಸರ್ಕಾರದ RDPR ಇಲಾಖೆಯಲ್ಲಿ 65 ಹುದ್ದೆಗಳ ನೇಮಕಾತಿ : ಪಿಯುಸಿ ಪಾಸಾಗಿದ್ದರೆ ಸಾಕು



















