ಸಿದ್ದರಾಮಯ್ಯ ನಮ್ಮ ಪಕ್ಷದ ಹಿರಿಯರು. ಸಿಎಂ, ಡಿಸಿಎಂ ನಾವೆಲ್ಲ ಕೆಲಸ ಮಾಡುತ್ತಿದ್ದೇವೆ. ಎಐಸಿಸಿ ಅಧ್ಯಕ್ಷ ಖರ್ಗೆ ನಮ್ಮ ರಾಜ್ಯದವರೇ ಆಗಿದ್ದಾರೆ. ಯಾವುದೇ ವಿಚಾರ ಇದ್ದರೂ ಕೂಡಿ ಚರ್ಚೆ ಮಾಡುತ್ತೇವೆ. ನಮ್ಮಲ್ಲಿ ಹೈಕಮಾಂಡ್ ಇದೆ. ಹೈಕಮಾಂಡೇ ಸುಪ್ರೀಂ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
ಡಿಕೆಶಿ ಕೂಡ ನಮ್ಮ ಪಕ್ಷದ ಹಿರಿಯ ನಾಯಕರು. ಚುನಾವಣೆ ವೇಳೆ ಸಾಕಷ್ಟು ಕೆಲಸ ಮಾಡಿದ್ದಾರೆ. ಬಹಿರಂಗವಾಗಿ ಮಾತನಾಡಬಾರದು ಎಂದು ಹೈಕಮಾಂಡ್ ಸೂಚನೆ ನೀಡಿದೆ. ಏನೇ ಇದ್ದರೂ ಪಕ್ಷದ ವೇದಿಕೆಯಲ್ಲಿ ಚರ್ಚಿಸಬೇಕು ಎಂದಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ. ನೀರಾವರಿ ಮಂತ್ರಿ ಇದ್ದಾಗ ಕೇಳಿದ್ದರು. ಕಾಲಕ್ಕೆ ತಕ್ಕಂತೆ ಎಲ್ಲವೂ ಆಗಲಿದೆ. ರಾಜ್ಯದಲ್ಲಿ ಶೇ. 17ರಷ್ಟು ವೀರಶೈವ ಸಮುದಾಯ ಇದೆ. ವಿರೇಂದ್ರ ಪಾಟೀಲರು ಸಿಎಂ ಆಗಿದ್ದಾಗ ಹೆಚ್ಚು ಸೀಟು ಬಂದಿದ್ವು. ಆಗ 128 ಸೀಟುಗಳು ಬಂದಿದ್ದವು. ಕೆಪಿಸಿಸಿ ಅಧ್ಯಕ್ಷರ ಕುರ್ಚಿಯೂ ಖಾಲಿ ಇಲ್ಲ. ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಸಚಿವರು ಹೇಳಿದ್ದಾರೆ.