ಬೆಂಗಳೂರು: ಕಾಂಗ್ರೆಸ್ ಗೆ ಉಪ ಚುನಾವಣೆಯ ಫಲಿತಾಂಶ ಬರುವುದಕ್ಕಿಂತ ಮುಂಚೆಯೇ ಸೋಲಿನ ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಸಿಎಂ ಸಿಎಂ ಸ್ಥಾನ ಕಳೆದುಕೊಳ್ಳುವ ಭಯದಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಪ್ರತಿ ಪಕ್ಷದ ಹೆಗಲ ಮೇಲೆ ಬಂದೂಕು ಇಟ್ಟು, ಸ್ವಪಕ್ಷದ ಶಾಸಕರು ಹಾಗೂ ಕಾಂಗ್ರೆಸ್ ಹೈಕಮಾಂಡ್ ಗೆ ಹೆದರಿಸುವ ಯತ್ನ ಮಾಡುತ್ತಿದ್ದಾರೆ. ಆದರೆ, ಅವರ ಪಕ್ಷದ ಹಲವರು ಅವರ ಕುರ್ಚಿಗೆ ಆಪತ್ತು ತರುತ್ತಿದ್ದಾರೆ. ಆದರೆ, ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿಯನ್ನು ಬದಲಿಸಲಿದೆ. ಬೆಳಗಾವಿಯ ಅಧಿವೇಶನ ಹೊಸ ಮುಖ್ಯಮಂತ್ರಿಯೊಂದಿಗೆ ನಡೆಯಲಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ತನ್ನ ಕುರ್ಚಿಗೆ ಅಪಾಯ ಇದೆ ಎಂಬುದನ್ನು ಅರ್ಥ ಮಾಡಿಕೊಂಡು, ಪರೋಕ್ಷವಾಗಿ ತಮ್ಮ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಈ ರೀತಿಯ 50 ಕೋಟಿಯ ಆಫರ್ ಗಳನ್ನು ತಮ್ಮ ಶಾಸಕರ ಮೇಲೆ ಹೇಳುತ್ತಿದ್ದಾರೆ.
ಸಿದ್ದರಾಮಯ್ಯನವರ ಹೈಕಮಾಂಡ್ ಗಡುವು ಮುಕ್ತಾಯವಾಗುತ್ತಿದೆ. ಇದೆಲ್ಲವನ್ನೂ ಅರ್ಥ ಮಾಡಿಕೊಂಡ ಸಿದ್ದರಾಮಯ್ಯ ತಮ್ಮನ್ನು ಮುಟ್ಟಲು ಬರಬೇಡಿ ಎಂಬ ಸಂದೇಶವನ್ನು ಹೈಕಮಾಂಡಿಗೂ ನೀಡುತ್ತಿದ್ದಾರೆ ಎಂದಿದ್ದಾರೆ.