ಬೆಳಗಾವಿ: ಸಿಎಂ ಸಿದ್ದರಾಮಯ್ಯ ಎಡಪಂಥೀಯ ಜನರ ವಿಚಾರ ಧಾರೆಗೆ ಮರುಳಾಗಿದ್ದು ಜಾತಿ ಜಾತಿಗಳ ನಡುವೆ ಬೆಂಕಿ ಹಚ್ಚುತ್ತಿದ್ದಾರೆಂದು ರಾಯಬಾಗದಲ್ಲಿ ರಾಜ್ಯಸಭಾ ಬಿಜೆಪಿ ಸದಸ್ಯ ಈರಣ್ಣ ಕಡಾಡಿ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ಸಮಾಜವಾದಿ ಚಿಂತನೆಯಿಂದ ಬಂದವರು ಆದರೆ ಸಮಾಜವಾದಿ ಚಿಂತನೆ ಬೇರೆಯದೇ ಹೇಳುತ್ತದೆ. ಕುರುಬ ಕ್ರಿಶ್ಚಿಯನ್, ಲಿಂಗಾಯತ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್, ಮುಸ್ಲಿಂ ಕ್ರಿಶ್ಚಿಯನ್ ಅಂತ ನೀವ್ಯಾಕೆ ಮಾಡಲಿಲ್ಲ? ಅಹಿಂದಗಳಿಗೆ ಸಿದ್ದರಾಮಯ್ಯ ಅನ್ಯಾಯ ಮಾಡುತ್ತಿದ್ದು ಜಾತಿಗಳನ್ನು ಒಡೆದು ಹಾಕುವ ಕೆಲಸ ಮಾಡುತ್ತಿರಿವುದು ಸರಿಯಲ್ಲ. ರಾಜ್ಯ ಸರ್ಕಾರ ಜಾತಿ ಜನಗಣತಿ ಮಾಡುವುದುನ್ನು ನಿಲ್ಲಿಸಿದರೆ ಒಳ್ಳೆಯದು. ನೀವು ಹೇಳಿದ್ದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎಂದು, ಆದರೆ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವುದು ಜಾತಿಗಣತಿ. ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಡಲು ಈ ಪ್ರಯತ್ನ ಮಾಡುತ್ತಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿಯವರು ಅಸಮಧಾನ ವ್ಯಕ್ತಪಡಿಸಿದ್ದಾರೆ.