ವಿಜಯಪುರ : ಸಿದ್ದರಾಮಯ್ಯ ಸರ್ಕಾರ ಹಿಂದೂಗಳ ಭಾವನೆಯಗೆ ಧಕ್ಕೆ ತರುವ ಕೆಲಸ ಮಾಡುತ್ತಿದೆ. ಮುಸಲ್ಮಾನ ಓಲೈಕೆ ಬಗ್ಗೆ ಸಿದ್ದರಾಮಯ್ಯ ಚಿಂತೆ ಮಾಡುತ್ತಲೇ ಇರುತ್ತಾರೆ ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಚಾಮುಂಡಿ ಬೆಟ್ಟ ಹಿಂದೂಗಳದಲ್ಲ ಎಂಬ ಡಿಕೆಶಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ ಮಾಡನಾಡಿದ ಶೆಟ್ಟರ್, ದಸರಾ ಉದ್ಘಾಟನೆಗೂ ಸಹ ಎಡಪಂಥೀಯ ಚಿಂತನೆ ಉಳ್ಳವರನ್ನು ಕರೆಯುತ್ತಾರೆ. ಹಿಂದೂ ಸಂಸ್ಕೃತಿ, ಪರಂಪರೆಗೆ ಧಕ್ಕೆ ತರುವ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಸಮಾಜ ಇದಕ್ಕೆ ಒಗ್ಗಟ್ಟಾಗಿ ಉತ್ತರ ನೀಡಬೇಕಿದೆ ಎಂದು ಹೇಳಿದ್ದಾರೆ.
ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಮುಸ್ಲಿಂಮರ ಒಲೈಕೆಗಾಗಿ ಹಿಂದೂಗಳ ಕ್ಷೇತ್ರದಲ್ಲಿ ನಡೆಯುವ ಹಬ್ಬವನ್ನು ಮುಸ್ಲಿಂಮರಿಂದ ಉದ್ಘಾಟನೆ ಮಾಡಿಸುವುದು ಸರಿಯಲ್ಲ. ಬಾನು ಮುಸ್ತಾಕ್ ಈ ಹಿಂದೆ ಕನ್ನಡ ತಾಯಿ ಭುವನೇಶ್ವರಿ ಬಗ್ಗೆ ಮಾತನಾಡಿದ್ದವರು. ಚಾಮುಂಡೇಶ್ವರಿ ತಾಯಿಯ ಬಗ್ಗೆ ಲಕ್ಷಾಂತರ ಭಕ್ತರು ನಂಬಿಕೆ ಮತ್ತು ವಿಶ್ವಾಸ ಇಟ್ಟಿದ್ದಾರೆ. ಸಾವಿರಾರು ಭಕ್ತರ ಭಾವನೆಗಳಿಗೆ ಧಕ್ಕೆ ತರುವ ವ್ಯಕ್ತಿತ್ವ ಬಾನು ಅವರದ್ದು ಎಂದು ಕಿಡಿಕಾರಿದ್ದಾರೆ.
ಧರ್ಮಸ್ಥಳ ವಿಚಾರದಲ್ಲೂ ಹಿಂದೂಗಳ ಭಾವನೆಗೆ ದ್ರೋಹ ಬಗೆಯುವ ಕೆಲಸ ಮಾಡುತ್ತಿದ್ದಾರೆ. ಸೆ.1ರಂದು ನಾವೇಲ್ಲ ಧರ್ಮಸ್ಥಳಕ್ಕೆ ಹೋಗುತ್ತಿದ್ದೇವೆ. ಸಿದ್ದರಾಮಯ್ಯ ಜಾತ್ಯಾತೀತವಾದಿಯಲ್ಲ ಅಲ್ಪಸಂಖ್ಯಾತರವಾದಿ. ಸಿದ್ದರಾಮಯ್ಯ ಬೆಳಿಗ್ಗೆಯಿಂದ ಸಂಜೆ ತನಕ ಅಲ್ಪಸಂಖ್ಯಾತರ ಬಗ್ಗೆ ಯೋಚನೆ ಮಾಡುತ್ತಾರೆ ಎಂದಿದ್ದಾರೆ.