ದಾವಣಗೆರೆ : ನಂಬಿಕೆ ದ್ರೋಹ, ವಿಶ್ವಾಸ ದ್ರೋಹಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸಿಎಂ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಇಂದು ದಾವಣಗೆರೆಯಲ್ಲಿ ಬೈ ಎಲೆಕ್ಷನ್ ಪ್ರಚಾರದ ಸಂಧರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಡಾ ಸೈಟ್ ಹಗರಣ,ಎಸ್‌ಸಿಪಿ-ಟಿಎಸ್‌ಪಿ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಎಲೆಕ್ಷನ್‌ಗೆ ಬಳಸಿಕೊಂಡಿದೆ. ಈ ಸರ್ಕಾರ ಭ್ರಷ್ಟಾಚಾರ ಮಾಡಿ ತುಘಲಕ್ ದರ್ಬಾರ್ ಮಾಡ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಈ ರಾಜ್ಯ ಕಂಡಂತಹ ಅತಿ ಭ್ರಷ್ಟ ಸರ್ಕಾರಕ್ಕೆ ಉಪಚುನಾವಣೆಯಲ್ಲಿ ತಕ್ಕಪಾಠ ಕಲಿಸಬೇಕು.ಈ ಬಾರಿಯ ದಾವಣಗೆರೆ, ಬಾಗಲಕೋಟೆಯ ಬೈ ಎಲೆಕ್ಷನ್‌ನಲ್ಲಿ ಜನರು ತಕ್ಕಪಾಠ ಕಲಿಸವ ವಿಶ್ವಾಸವಿದೆ ಎಂದಿದ್ದಾರೆ.
ರಾಜ್ಯದಲ್ಲಿ ಕುರ್ಚಿ ಕಿತ್ತಾಟ, ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಗ್ಯಾರಂಟಿ ಹೆಸರಲ್ಲಿ ರಾಜ್ಯ ದಿವಾಳಿ ಮಾಡಿದ್ದು, ಸರಿಯಾದ ರಸ್ತೆಯಿಲ್ಲ. 2000 ,ರೂ. ಗೃಹಲಕ್ಷ್ಮೀ ಹಣ ಹಾಕಿ ಸಿಕ್ಜಸಿಕ್ಕ ವಸ್ತುಗಳ ದರ ಏರಿಕೆ ಮಾಡಿದ್ದಾರೆ. 39 ಸಾವಿರ ಕೋಟಿ ಎಸ್‌ಸಿಪಿ-ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗೆ ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡು ದಲಿತ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರ ದೊಡ್ಡ ಅನ್ಯಾಯ ಮಾಡಿದೆ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ತೆಲಂಗಾಣ ಚುನಾವಣೆಗೆ ಬಳಕೆ ಮಾಡಿದೆ ಎಂದು ದೂರಿದ್ದಾರೆ.
ಇದನ್ನೂ ಓದಿ : ಮದ್ವೆ ಮಾಡಿಲ್ಲ ಎಂದು ತಾಯಿಯನ್ನೇ ಕೊಲ್ಲಲು ಯತ್ನಿಸಿದ ಪಾಪಿ ಮಗ!


















