ಬೆಂಗಳೂರು : ಸಿದ್ದರಾಮಯ್ಯ ನವರ ನಿದ್ದೆ ಸರ್ಕಾರ ಇದು. ಭ್ರಷ್ಟಾಚಾರದ ಹೊಳೆಯಲ್ಲಿ ಮಿಂದು ಮೇಯ್ತಿದೆ. ಅಬಕಾರಿ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ನೇರ ಕಾರಣ ಸಿದ್ದರಾಮಯ್ಯ ಎಂದು ಆರ್ ಅಶೋಕ್ ಆರೋಪಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ವಿಪಕ್ಷ ನಾಯಕರಾದ ಆರ್ ಅಶೋಕ್ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ವರ್ಷದಿಂದ ವರ್ಷಕ್ಮೆ ಕಲೆಕ್ಷನ್ ಟಾರ್ಗೆಟ್ ಕೊಡ್ತಿದ್ರು. ದರ ಪರಿಣಾಮ ಸನ್ನದುಗಳು ಅಬಕಾರಿ ಇಲಾಖೆಯಲ್ಲಿ ಹರಾಜು ಆಗ್ತಿದೆ. ನಿನ್ನೆ ಲೋಕಾಯುಕ್ತ ಅಧಿಕಾರಿಗಳು ದೊಡ್ಡ ತಿಮಿಂಗಿಲ ಬಂಧಿಸಿದ್ದಾರೆ. ಒಂದೇ ಒಂದು ಸನ್ನದಿಗೆ 2.30 ಕೋಟಿ ಕೇಳಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದೆ. ಅಬಕಾರಿ ಇಲಾಖೆ ಆರ್ಥಿಕ ಇಲಾಖೆಯಡಿ ಬರುತ್ತೆ. ಅಬಕಾರಿ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ನೇರ ಕಾರಣ ಸಿದ್ದರಾಮಯ್ಯ ಎಂದು ಕಿಡಿಕಾರಿದ್ದಾರೆ.
ನಕಲಿ ಗಾಂಧಿಗಳು ಇವರು, ಗಾಂಧಿ ಹೆಸರು ಹೇಳಲು ನೈತಿಕತೆ ಇಲ್ಲ ಗಾಂಧಿಯವರ ಬಗ್ಗೆ ಮಾತಾಡ್ತಾರೆ, ಎಲ್ಲಿದೆ ಆದರ್ಶ? ಜನರನ್ನು ಕುಡಿಸಿ ಕುಡಿಸಿ ಹಾಳು ಮಾಡ್ತಿದ್ದಾರೆ. ಇನ್ನೊಂದು ಕಡೆ ಬೆಂಗಳೂರನ್ನು ನಶೆಯಲ್ಲಿ ಮುಳುಗಿಸಿದ್ದಾರೆ. ಅಬಕಾರಿ ಮಂತ್ರಿ ತಿಮ್ಮಾಪೂರ ಒಂದು ಕ್ಷಣವೂ ಅಧಿಕಾರದಲ್ಲಿರಬಾರದು, ರಾಜೀನಾಮೆ ಕೊಡಬೇಕು. ತಿಮ್ಮಾಪೂರ ರಾಜೀನಾಮೆ ಕೊಡದಿದ್ರೆ ಸಿಎಂಗೆ 85% ಕಮೀಷನ್ ಹೋಗ್ತಿದೆ ಅಂತರ್ಥ. ಇಲ್ಲಾಂದ್ರೆ ಮಂತ್ರಿಗಳನ್ನು ಸಂಪುಟದಿಂದ ಸಿಎಂ ತೆಗೆಯಲಿ ಎಂದು ಆಕ್ರೋಶಿಸಿದ್ದಾರೆ.
ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿಲ್ಲದ ಕೈದಿಗಳ ಪುಂಡಾಟ | ಅಸಿಸ್ಟೆಂಟ್ ಜೈಲರ್ ಮೇಲೆ ಹಲ್ಲೆ : ಪ್ರಕರಣ ದಾಖಲು!


















