ಮಂಡ್ಯ : ಸಿದ್ದರಾಮಯ್ಯ ಅವರಿಗೆ ಕುಟುಂಬ ರಾಜಕಾರಣ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಸಿಎಂ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಕುಟುಂಬ ರಾಜಕಾರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಟಿ ಎಸ್ ಛತ್ರ ಗ್ರಾಮದಲ್ಲಿ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಮೊದಲ ಮಗನನ್ನು ಬಳಸಲ ನೋಡಿದರು. ಅವರ ಅಕಾಲಿಕ ಮರಣದಿಂದ ಎರಡನೇ ಮಗನನ್ನು ರಾಜಕೀಯಕ್ಕೆ ಕರೆ ತಂದಿದ್ದಾರೆ. ವೈದ್ಯರಾಗಿದ್ದವರನ್ನು ರಾಜಕೀಯಕ್ಕೆ ಕರೆದಂದು ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಮನೆಯಲ್ಲಿ ಎಷ್ಟು ಜನ ಅಧಿಕಾರ ಪಡೆದಿದ್ದಾರೆ? ಸಹೋದರನನ್ನು ಕೆಎಂಎಫ್ ಅಧ್ಯಕ್ಷ ನನ್ನಾಗಿ ಮಾಡಲು ಮುಂದಾಗಲಿಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ. ಎರಡು ಮೂರು ಜನ ಶಾಸಕರು ಇರುವ ಕುಟುಂಬ ಸಾಕಷ್ಟಿದೆ. ದೇವೇಗೌಡರು ವಸೂಲಿ ಮಾಡಲು ನಮ್ಮನ್ನು ರಾಜಕೀಯಕ್ಕೆ ತರಲಿಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸಲು ನಾವು ರಾಜಕೀಯಕ್ಕೆ ಬಂದಿದ್ದೇವೆ ಎಂದು ತಿಳಿಸಿದ್ದಾರೆ..
ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಯುವ ವಿಚಾರವಾಗಿ ಮಾತನಾಡಿ, ಮುಂದಿನ ಚುನಾವಣೆವರೆಗೂ ಕಾದು ನೋಡಬೇಕು. 2028ಕ್ಕೆ ನಾನೇ ಸಿಎಂ ಅಂತಿದ್ದಾರೆ.ಕೊನೆ ಉಸಿರಿರುವವರೆಗೂ ರಾಜಕೀಯ ಮಾಡ್ತೀನಿ ಎಂದಿದ್ದಾರೆ. 2013ರ ವಿಧಾನಸಭೆಯಲ್ಲಿ ಇದೇ ನನ್ನ ಕೊನೆ ಚುನಾವಣೆ ಎಂದಿದ್ರು. ಅಧಿಕಾರದ ರುಚಿ ನೋಡಿದ ಮೇಲೆ ನಾನೇ ಪರ್ಮನೆಂಟ್ ಸಿಎಂ ಅಂತಿದ್ದಾರೆ. ಜನರೇ ಮುಂದೆ ತೀರ್ಮಾನ ಮಾಡ್ತಾರೆ ಎಂದಿದ್ದಾರೆ.
ಯುದ್ಧದ ಸಂಧರ್ಭದಲ್ಲಿ ಕಾಂಗ್ರೆಸ್ ರಾಜಕೀಯ ಮಾಡ್ತಿದೆ. ಬೇರೆ ದೇಶಗಳಲ್ಲಿ ಲಾಕ್‌ಡೌನ್ ಪರಿಸ್ಥಿತಿ ತಲುಪಿದ್ದಾರೆ. ನಮ್ಮ ದೇಶ ಉತ್ತಮ ಭಾಂದವ್ಯದಿಂದ, ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದೆ. ಕೇಂದ್ರ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿದೆ. ನೀವು ಏನ್ ಮಾಡ್ತಾಯಿದ್ದೀರಾ? ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ: ಬೈ ಎಲೆಕ್ಷನ್‌ನಲ್ಲಿ ಬಿಜೆಪಿ ಗೆದ್ದ ಬಳಿಕ ರಾಜ್ಯ ರಾಜಕೀಯದಲ್ಲಿ ಅಲ್ಲೋಲಕಲ್ಲೋಲವಾಗುತ್ತೆ : ವಿಜಯೇಂದ್ರ



















