ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ನಟ ದರ್ಶನ್, ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ಕೋಡಿಮಠದ ಶ್ರೀಗಳಾದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ(Kodi Mutt Swamiji) ಗಳು ಭವಿಷ್ಯ ನುಡಿದಿದ್ದಾರೆ.
ರಾಜ್ಯದಲ್ಲಿ ಈ ಬಾರಿ ಶುಭಗಳಿಗಿಂತ ಅಶುಭಗಳೇ ಹೆಚ್ಚಾಗಿ ನಡೆಯಲಿವೆ. ದೇಶದಲ್ಲಿ ಜಲಕಂಟಕ, ಅಗ್ನಿಕಂಟಕ, ವಾಯು ಕಂಟಕಗಳು ಹೆಚ್ಚಾಗಲಿವೆ. ರಾಜ್ಯದಲ್ಲಿ ಈ ಬಾರಿ ಅತಿವೃಷ್ಟಿ ಸಾಧ್ಯತೆ ಇದೆ. ಗುರುಗಳು ಶಿಷ್ಯರಾಗ್ತಾರೆ. ಶಿಷ್ಯರು ಗುರುಗಳಾಗ್ತಾರೆ. ಹೆಣ್ಣು ಮಕ್ಕಳ ಪ್ರಾಬಲ್ಯ ಹೆಚ್ಚಾಗಲಿದೆ. ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ಆಪತ್ತು ಇಲ್ಲ ಎಂದು ಹೇಳಿದ್ದಾರೆ.
ಇನ್ನು ಶ್ರಾವಣದ ನಂತರ ಮತ್ತೊಂದು ಭವಿಷ್ಯ ಹೇಳುತ್ತೇನೆ. ಪ್ರಧಾನಿ ಮೋದಿ ಅವರ ಭವಿಷ್ಯ ಆಗ ಹೇಳುತ್ತೇನೆ ಎಂದು ಹೇಳಿದ್ದಾರೆ. ಕೊಲೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ನಡುವಿನ ವಿವಾದದ ಬಗ್ಗೆ ಮಾತನಾಡಿರುವ ಅವರು, ತಂದೆ-ತಾಯಿ ಮಾತು ಕೇಳಬೇಕು. ಕೋಪದ ಕೈಗೆ ಬುದ್ಧಿ ಕೊಟ್ಟರೆ ಈ ರೀತಿಯ ಅವಘಡಗಳು ಸಂಭವಿಸುತ್ತವೆ ಎಂದು ಉಮಾಪತಿಯೇ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

















