ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಇತ್ತೀಚೆಗೆ ಸಿಎಂ ಹಾಗೂ ಕೆಪಿಸಿಸಿ ಪಟ್ಟದ ಕೂಗು ಜೋರಾಗಿ ಕೇಳಿ ಬರುತ್ತಿದೆ. ಸಿಎಂ ಸಿದ್ದರಾಮಯ್ಯ ಬಣ ಹಾಗೂ ಡಿಕೆಶಿ ಬಣಗಳ ಮಧ್ಯೆ ಬಹಿರಂಗ ಹೇಳಿಕೆಗಳು ಜೋರಾಗಿ ಕೇಳಿ ಬುರುತ್ತಿವೆ. ಈ ಹಿನ್ನೆಲೆಯಲ್ಲಿ ಈಗ ಡಿಕೆಶಿ ಕೂಡ ಟಾಂಗ್ ಕೊಟ್ಟಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಸಚಿವ ಸತೀಶ್ ಜಾರಕಿಹೊಳಿ, ನಮಗೆ ಸಿದ್ದರಾಮಯ್ಯ ಬೇಕು. ಅವರೇ ಇರಬೇಕು. ಹೊಸ ನಾಯಕ ತಯಾರಾಗುವ ತನಕ ಅವರ ಅವಶ್ಯಕತೆ ಮುಖ್ಯ ಎಂದು ಸ್ಫೋಟಕ ಹೇಳಿಕೆ ನೀಡಿದ್ದರು. ಇದಕ್ಕೆ ಈಗ ಡಿಕೆಶಿ ತಿರುಗೇಟು ನೀಡಿದ್ದಾರೆ.
ಡಿಕೆಶಿ ಹೇಳಿದ್ದೇನು?
ಸಿದ್ದರಾಮಯ್ಯ ನಮ್ಮ ನಾಯಕ. ಅವರು ಎಲ್ಲ ಚುನಾವಣೆಗೂ ಬೇಕು. ಜಿಲ್ಲಾ ಪಂಚಾಯಿತಿಗೂ ಬೇಕು, ತಾಲೂಕು ಪಂಚಾಯಿತಿಗೂ ಬೇಕು, ಅಸೆಂಬ್ಲಿಗೂ ಬೇಕು. ಪಾರ್ಲಿಮೆಂಟಿಗೂ ಬೇಕು. ಅವರು ಕಾಂಗ್ರೆಸ್ನ ನಾಯಕ. ಅವರನ್ನು ಕಾಂಗ್ರೆಸ್ ಪಕ್ಷ 2 ಬಾರಿ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಆದರೆ, ಅವರ ಹೆಸರು ದುರ್ಬಳಕೆ ಮಾಡಿಕೊಳ್ಳುವುದು ಬೇಡ. ಅದರ ಅವಶ್ಯಕತೆನೂ ಇಲ್ಲ. ಅವರು ನಮ್ಮ ಪ್ರಶ್ನಾತೀತ ನಾಯಕ ಎಂದು ಹೇಳಿದ್ದಾರೆ.