ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೆ ಅಹಿಂದ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ ಎಂಬ ಚರ್ಚೆ ಶುರುವಾಗಿದೆ. ಇದೇ ನವೆಂಬರ್ 26ರಂದು ಮೈಸೂರಿನಲ್ಲಿ ಸರ್ಕಾರದ ವತಿಯಿಂದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಪೂರ್ವಸಿದ್ಧತಾ ಸಭೆಯನ್ನು ಆಯೋಜಿಸಲಾಗಿತ್ತು.
ಈಗಾಗಲೇ ಹಲವು ನಾಯಕರು ಸಿದ್ದರಾಮಯ್ಯ ಅವರಿಂದ ದೂರ ಸರಿದಿದ್ದಾರೆ. ಹೀಗಾಗಿ ತಮ್ಮ ವರ್ಚಸ್ಸನ್ನು ಮತ್ತೆ ವೃದ್ಧಿಸಿಕೊಳ್ಳಲು ಸಿದ್ದರಾಮಯ್ಯ ಅವರು ಈ ಶಕ್ತಿ ಪ್ರದರ್ಶನಕ್ಕೆ ನಿರ್ಧರಿಸಿದ್ದಾರೆ ಎನ್ನಲಾಗಿದೆ. ಇಂದು ನಡೆದ ಈ ಸಿದ್ಧತಾ ಸಭೆಯಲ್ಲಿ ಹಲವು ಸಚಿವರು ಹಾಗೂ ನಾಯಕರು ಭಾಗವಹಿಸಿದ್ದರು. ಆದರೆ ಈ ಮಹತ್ವದ ಸಭೆಯಿಂದ ಸಚಿವ ಮಹದೇವಪ್ಪ ಅವರು ದೂರ ಉಳಿದಿದ್ದರು.


















