ರಾಜ್ಯ ರಾಜಕೀಯದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣದ ಪೊಲೀಸ್ ತನಿಖೆ ಮಹತ್ವದ ಹಂತ ತಲುಪಿರುವ ಬೆನ್ನಲ್ಲೇ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ದೆಹಲಿಯಲ್ಲಿ ಬೀಡುಬಿಟ್ಟಿರುವ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಭೇಟಿಗೆ ಸಮಯ ಕೋರಿದ್ದು, ಸಂಜೆ ಇಬ್ಬರೂ ನಾಯಕರ ನಡುವೆ ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳು ಹಾಗೂ ಆಂತರಿಕ ಬೆಳವಣಿಗೆಗಳ ಕುರಿತು ಪ್ರಮುಖ ಚರ್ಚೆಗಳು ನಡೆಯುವ ಸಾಧ್ಯತೆಯಿದೆ.


















