ಬಳ್ಳಾರಿ: ಸಿದ್ದರಾಮಯ್ಯ ಹಗರಣದಲ್ಲಿ ಮುಳುಗಿದ್ದಾರೆ. ಅವರು ಕೇವಲ 15 ರಿಂದ 20 ದಿನಗಳಲ್ಲಿ ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಭವಿಷ್ಯ ನುಡಿದಿದ್ದಾರೆ.
ಸಂಡೂರು ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈಲಿಗೆ ಹೋಗುವ ಕಾಲ ದೂರವಿಲ್ಲ. ಸಿದ್ದರಾಮಯ್ಯ ಹಾಗೂ ಕುಟುಂಬ ಮುಡಾ ಹಗರಣದಲ್ಲಿ ಸಿಲುಕಿಕೊಂಡಿದೆ. ಈಗಾಗಲೇ ಲೋಕಾಯುಕ್ತ ತನಿಖೆ ಎದುರಿಸುತ್ತಿದೆ. ಈ ಹಗರಣದಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದ್ದು, ಕೇವಲ 20 ದಿನಗಳಲ್ಲಿ ರಾಜೀನಾಮೆ ನೀಡಲಿದ್ದಾರೆ. ಅಲ್ಲದೇ, ಜೈಲು ಸೇರೋದು ಗ್ಯಾರಂಟಿ ಎಂದಿದ್ದಾರೆ.
ಇಂದು ಜನ ತುಂಬಾ ಜಾಗೃತರಾಗಿದ್ದಾರೆ. ಹಣ, ಹೆಂಡ, ಅಧಿಕಾರದ ಬಲದಿಂದ ಹಾಗೂ ಜಾತಿ ವಿಷಬೀಜ ಬಿತ್ತಿ ರಾಜಕಾರಣ ಮಾಡುವ ಕಾಲ ಹೋಗಿದೆ. ಉಪ ಚುನಾವಣೆಯಲ್ಲಿ ನಾವು ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ. ರಾಜ್ಯದಲ್ಲಿ ಕಾಂಗ್ರೆಸ್ ಕಿತ್ತೊಗೆಯಲು ಜನರು ಮನಸ್ಸು ಮಾಡಿದ್ದಾರೆ ಎಂದಿದ್ದಾರೆ.