ಬೆಂಗಳೂರು : ಈ ಬಾರಿ ಸಿಎಂ ಸಿದ್ದರಾಮಯ್ಯ ಅವರು 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡಿಸಲಿದ್ದಾರೆ. ಜನರ ಮೇಲೆ ಮತ್ತೊಮ್ಮೆ ತೆರಿಗೆಗಳ ಹೊರ ಹಾಕುವುದು ಖಚಿತ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಎಂದರೆ ತೆರಿಗೆ ಹೇರುವ ರಾಮಯ್ಯ ಆಗಿದ್ದಾರೆ. ಈ ಬಾರಿ ಕೇಂದ್ರ ಬಜೆಟ್‌ನಲ್ಲಿ ಸಚಿವ ನಿರ್ಮಲಾ ಸೀತಾರಾಮನ್ ತೆರಿಗೆಗಳ ಹೊರೆಯನ್ನು ಕಡಿಮೆ ಮಾಡಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ತಿಂಗಳಿಗೆ ನಾಲ್ಕರಂತೆ ತೆರಿಗೆ ಹಾಕುತ್ತಿದ್ದಾರೆ. ಈಗಾಗಲೇ 36 ತೆರಿಗೆಗಳನ್ನು ಜನರ ಮೇಲೆ ಹೇರಿದ್ದಾರೆ ಎಂದು ಆರೋಪಿಸಿದ್ದಾರೆ.
ಚುನಾವಣೆಗೆ ಮುನ್ನ ಗ್ಯಾರಂಟಿ ಯೋಜನೆಗಳನ್ನು ಜನರ ಮೇಲೆ ಹೊರ ಹಾಕದೇ ಜಾರಿಗೊಳಿಸುವುದಾಗಿ ಭರವಸೆ ನೀಡಿದರೂ, ಈಗ ತೆರಿಗೆಗಳ ಮೂಲಕ ಜನರ ಮೇಲೆ ಭಾರ ಹಾಕಲಾಗಿದೆ ಎಂದು ಅವರು ದೂರಿದರು. ಸಿದ್ದರಾಮಯ್ಯ ಅವರ ಅವಧಿ ಮುಗಿಯುವ ವೇಳೆಗೆ ರಾಜ್ಯದ ಒಟ್ಟು ಸಾಲ 78 ಲಕ್ಷ ಕೋಟಿ ಮೀರಲಿದೆ. ಇದರಿಂದ ಆರ್ಥಿಕ ಶಿಸ್ತು ಹಾಳಾಗಲಿದೆ ಎಂದು ಅಶೋಕ್ ಹೇಳಿದ್ದಾರೆ.
ಸಿಎಂ ಇಲ್ಲದ ಆದಾಯವನ್ನು ಸೃಷ್ಟಿಸಿದಂತೆ ತೋರಿಸಿ ಜಿಎಸ್ಸಿಪಿಗೆ ಹೋಲಿಕೆಯ ಶೇಕಡಾವಾರು ಕಡಿಮೆ ಇದ ಎಂದು ಪ್ರದರ್ಶಿಸುತ್ತಿದ್ದಾರೆ. ಇದನ್ನು ಆರ್ಥಿಕ ಶಿಸ್ತು ಎಂದು ತೋರಿಸುವುದು ತಪ್ಪು ಎಂದು ಅವರು ಟೀಕಿಸಿದರು. “ಸಾಲ ಮಾಡಿ ಸರ್ಕಾರ ನಡೆಸಲು ಯಾರೂ ಬೇಕಿಲ್ಲ. ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ ಎಂಬ ಜನರ ನಿರೀಕ್ಷೆ ಸುಳ್ಳಾಗಿದೆ” ಎಂದರು.
ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾಲವಿಲ್ಲದ ಬಜೆಟ್ ಮಂಡಿಸಿದ್ದರು. ಇನ್ನೂ ₹24,400 ಕೋಟಿ ಸಾಲ ಪಡೆಯುವ ಅವಕಾಶವಿದ್ದರೂ ಅವರು ಸಾಲ ಪಡೆದಿರಲಿಲ್ಲ. ಆದರೆ ಕಾಂಗ್ರೆಸ್ ಸರ್ಕಾರ ಪ್ರತಿ ವರ್ಷ ಸಾಲ ಪಡೆಯುತ್ತಿದೆ. ಈ ಬಾರಿ ₹1.15 ಲಕ್ಷ ಕೋಟಿ ಸಾಲ ಪಡೆಯುವ ಸಾಧ್ಯತೆ ಇದೆ ಎಂದು ಅಶೋಕ್ ಆರೋಪಿಸಿದ್ದಾರೆ.
ಇದನ್ನೂ ಓದಿ : ಬೆಂಗಳೂರಿನ IIMBಯಲ್ಲಿ ಅಕಾಡೆಮಿಕ್ ಅಸೋಸಿಯೇಟ್ ಹುದ್ದೆಗಳ ನೇಮಕ.. ಕೂಡಲೇ ಅರ್ಜಿ ಸಲ್ಲಿಸಿ



















