ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಗೆ ಕನ್ನಡಿಗರು ಸೇರಿದಂತೆ 26 ಮಂದಿ ಸಾವನ್ನಪ್ಪಿದ್ದಾರೆ. ಈಗಾಗಲೇ ಭಾರತೀಯರಲ್ಲಿ ಪ್ರತೀಕಾರದ ಕಿಚ್ಚು ಹೊತ್ತಿ ಉರಿಯುತ್ತಿದೆ. ಪಾಕಿಸ್ತಾನಿಯರಿಗೆ ತಕ್ಕ ಪಾಠ ಕಲಿಸಲೇಬೇಕೆಂದು ಪಣ ತೊಟ್ಟು ನಿಂತಿದ್ದಾರೆ.
ಇಂತಹ ಸಂಧರ್ಭದಲ್ಲಿ ಸಿಎಂ ಸಿದ್ದರಾಮಯ್ಯನವರು ಹೇಳಿರುವ ಹೇಳಿಕೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಅಸಲಿಗೆ ಸಿದ್ದರಾಮಯ್ಯ ಹೇಳಿದ್ದಾದರು ಏನು ಅಂತಾ ನೋಡೋದಾದರೆ, ಪಾಕಿಸ್ತಾನದ ಜೊತೆ ಯುದ್ಧ ಮಾಡುವ ಅಗತ್ಯತೆ ಇಲ್ಲ. ಆದರೆ, ಅನಿವಾರ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಪಹಲ್ಗಾಮ್ ಅದೊಂದು ಯಾತ್ರಾರ್ಥಿಗಳ ಸ್ಥಳ. ಅಲ್ಲಿ ಭದ್ರತೆಯನ್ನು ಕೈಗೊಳ್ಳಬೇಕಿತ್ತು. ಈ ಹಿಂದೆ ಪುಲ್ವಾಮಾ ದಾಳಿಯಲ್ಲೂ ಘೋರ ದುರಂತ ಸಂಭವಿಸಿತ್ತು. ಕೇಂದ್ರ ಸರ್ಕಾರವೇ ಭದ್ರತಾ ವೈಫಲ್ಯ ಆಗಿದೆ. ಅದೊಂದು ಇಂಟಲಿಜೆನ್ಸ್ ಹಾಗೂ ಸೆಕ್ಯೂರಿಟಿ ಫೇಲ್ಯೂರ್. ಕೇಂದ್ರ ಸರ್ಕಾರಕ್ಕೆ ಭದ್ರತಾ ಕ್ರಮ ತೆಗೆದುಕೊಂಡಿಲ್ಲ. ಈಗ ಯಾವುದೇ ಕ್ರಮ ತೆಗೆದುಕೊಂಡರೂ 26 ಜನ ವಾಪಸ್ ಬರುವುದಿಲ್ಲ ಎಂದು ಸಿಎಂ ಸಿದ್ದು ಮಾಧ್ಯಮಗಳೊಂದಿಗೆ ತಿಳಿಸಿದರು.
ಈ ವೀಡೀಯೋವನ್ನು ಪಾಕಿಸ್ತಾನದ ಮಾಧ್ಯಮಗಳಲ್ಲಿ ಕೂಡ ಪ್ರಕಟಿಸಲಾಗಿದೆ. ಇದು ವಿಪಕ್ಷದವರಿಗೆ ಅಸ್ತ್ರವಾಗಿದ್ದು, ಸಿದ್ದು ವಿರುದ್ಧ ಹಲವಾರು ಟೀಕೆ ಮಾಡುತ್ತಿದ್ದಾರೆ.