ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣಗೊಂಡಿರುವ ನೂತನ ಸೇತುವೆ ಇದೆ ಬರುವ ಜು.14ಕ್ಕೆ ಲೋಕಾರ್ಪಣೆಗೊಳ್ಳಲಿದೆ.
ಸೇತುವೆ ನಿರ್ಮಾಣದ ಬಗ್ಗೆ ರಾಜ್ಯ ಬಿಜೆಪಿ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದೆ. ಸಿಗಂದೂರು ಕೇಬಲ್ ಸೇತುವೆಯನ್ನು ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಮಾಡಲಾಗಿದೆ ಎಂದು ಹೇಳಿದೆ.
ಈಗಾಗಲೇ ಸೇತುವೆ ಲೋಕಾರ್ಪಣೆಗೆ ದಿನಾಂಕ ನಿಗದಿಯಾಗಿದೆ. ಅಲ್ಲದೇ, ಸೇತುವೆ ನಿರ್ಮಾಣದ ಕ್ರೆಡಿಟ್ ವಾರ್ ಶುರುವಾಗಿದೆ. ಸೇತುವೆ ಉದ್ಘಾಟನೆಯ ಸಭಾಕಾರ್ಯಕ್ರಮ ಸಾಗರ ನಗರದ ನೆಹರೂ ಮೈದಾನದಲ್ಲಿ ನಡೆಸಲು ನಿಶ್ಷಯಿಸಲಾಗಿದೆ. ಸಂಸದ ಬಿ.ವೈ. ರಾಘವೇಂದ್ರ ಅವರು ನೆಹರೂ ಮೈದಾನದಲ್ಲಿ ಸಭಾ ಕಾರ್ಯಕ್ರಮದ ವೇದಿಕೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸುವ ಮೂಲಕ ಸಭೆ ನಡೆಯುವ ಸ್ಥಳವನ್ನು ಅಂತಿಮಗೊಳಿಸಿದ್ದಾರೆ.
ಕೇಂದ್ರ ಸಚಿವ ನಿತಿನ್ ಗಡ್ಕೆರಿ, ಪ್ರಹ್ಲಾದ್ ಜೋಶಿ ಸಭೆಯಲ್ಲಿ ಭಾಗಿಯಾಗುವುದು ನಿಶ್ಚಿತವಾಗಿದೆ. ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡ ಕೂಡ ಈ ಸಮಾರಂಭಕ್ಕೆ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ.



















