ಬೆಂಗಳೂರು: ಕೊನೆಗೂ ರಾಜ್ಯ ಸರ್ಕಾರವು ಬಿಬಿಎಂಪಿಯನ್ನು 5 ಹೋಳಾಗಿ ಮಾಡಿದೆ. ಗ್ರೇಟರ್ ಬೆಂಗಳೂರು ಕಾಯ್ದೆಯಡಿ 5 ನಗರ ಪಾಲಿಕೆಗಳ ಸ್ಥಾಪನೆ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ನಾಗರಿಕರಿಂದ ಆಕ್ಷೇಪಣೆಗಳು ಹಾಗೂ ಸಲಹೆಗಳನ್ನು ಆಹ್ವಾನಿಸಲಾಗಿದೆ. ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ, 2024ರ(2025ರ ಕರ್ನಾಟಕ ಕಾಯ್ದೆ ಸಂಖ್ಯೆ 36) ಪ್ರಕರಣ 5ರ ಉಪ ಪ್ರಕರಣ(1) ಮತ್ತು ಪ್ರಕರಣ 7ರ ಉಪ ಪ್ರಕರಣ(1) ರಡಿಯಲ್ಲಿ 5 ನಗರ ಪಾಲಿಕೆಗಳನ್ನು ಸ್ಥಾಪನೆ ಮಾಡಿದೆ.

ಜನಸಂಖ್ಯೆ ವಿಸ್ತೀರ್ಣ, ಜನಸಂಖ್ಯಾ ಸಾಂದ್ರತೆ, ಉತ್ಪತ್ತಿಯಾಗುವ ಆದಾಯ, ಕೃಷಿಯೇತರ ಚಟುವಟಿಕೆಗಳಲ್ಲಿನ ಉದ್ಯೋಗದ ಶೇಕಡಾವಾರು, ಆರ್ಥಿಕ ಪ್ರಾಮುಖ್ಯತೆ, ಪ್ರದೇಶದಲ್ಲಿ ಲಭ್ಯವಿರುವ ಮೂಲಸೌಕರ್ಯ ಸೌಲಭ್ಯಗಳ ಆಧಾರದ ಮೇಲೆ 5 ಪಾಲಿಕೆಗಳಾಗಿ ವಿಭಜನೆ ಮಾಡಿದೆ. 5 ಪಾಲಿಕೆಗಳ ನಿರ್ದಿಷ್ಟ ಪಡಿಸಿದ ಗಡಿಗಳ ವಿವರಗಳನ್ನು ಅನುಸೂಚಿ-01 ರಲ್ಲಿ ಪ್ರಕಟಿಸಲಾಗಿದೆ.

5 ನಗರ ಪಾಲಿಕೆಗಳಿಗೆ ನೂತನ ಹೆಸರುಗಳು ನಿರ್ಧಾರ
1. ಬೆಂಗಳೂರು ಪಶ್ಚಿಮ ನಗರ ಪಾಲಿಕೆ
2. ಬೆಂಗಳೂರು ದಕ್ಷಿಣ ನಗರ ಪಾಲಿಕೆ
3. ಬೆಂಗಳೂರು ಉತ್ತರ ನಗರ ಪಾಲಿಕೆ
4. ಬೆಂಗಳೂರು ಪೂರ್ವ ನಗರ ಪಾಲಿಕೆ
5. ಬೆಂಗಳೂರು ಕೇಂದ್ರ ನಗರ ಪಾಲಿಕೆ
ಸಾರ್ವಜಿಕರು ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಬಹುದು ಎಂದು ಸೂಚಿಸಲಾಗಿದೆ.