ಬೆಂಗಳೂರು : ಸಿಲಿಕಾನ್ ಸಿಟಿ ಮದ್ಯ ಪ್ರಿಯರಿಗೆ ಎರಡು ದಿನ ಬ್ಯಾಡ್ ನ್ಯೂಸ್ ಇರಲಿದೆ. ಈಗಾಗಲೇ ಸಿಲಿಂಡರ್ ಸಂಕಷ್ಟದಲ್ಲಿರುವ ಜನರಿಗೆ ಈಗ ಮತ್ತೊಂದು ಶಾಕ್ ಎದುರಾದಂತಾಗಿದೆ. ಬೆಂಗಳೂರಿನಲ್ಲಿ (Bengaluru) ಎರಡು ದಿನಗಳ ಕಾಲ ಮದ್ಯ ಮಾರಾಟ(Alcohal Ban)ಕ್ಕೆ ನಿಷೇಧ ಹೇರಲಾಗಿದೆ.
ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ವತಿಯಿಂದ ನಾಳೆ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಿಟಿಯ 8 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ದಿನ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಈ ಪ್ರತಿಭಟನೆಯ ನಂತರ ಮಾರ್ಚ್ 25ರಂದು ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟ ಕೂಡ ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಿದ್ದಾರೆ. ಈ ಎರಡು ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಸಾಧ್ಯತೆ ಇರುವುದರಿಂದಾಗಿ ಈ ಬಗ್ಗೆ ಆದೇಶ ಹೊರಡಿಸಲಾಗಿದೆ.
ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕಾನೂನು ಬಾಹಿರ ಕೃತ್ಯ ಮತ್ತು ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗವನ್ನುಂಟು ಮಾಡುವ ಭೀತಿ ಇರುವ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 25ರ ರಾತ್ರಿ 10ರ ವರೆಗೆ ಬೆಂಗಳೂರಿನ 8 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಉಪ್ಪಾರಪೇಟೆ, ಸಿಟಿ ಮಾರ್ಕೆಟ್, ಕಾಟನ್ಪೇಟೆ, ಕಲಾಸಿಪಾಳ್ಯ, ಚಾಮರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿ ಮತ್ತು ಶೇಷಾದ್ರಿಪುರಂ, ಹೈಗೌಂಡ್ಸ್, ಹಲಸೂರುಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ದಿನಗಳ ಎಲ್ಲಾ ಮದ್ಯದಂಗಡಿ, ಬಾರ್ ಮತ್ತು ರೆಸ್ಟೋರೆಂಟ್ಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಕಮಿಷನರ್ ಸೀಮಂತ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ : ಆರ್ಸಿಬಿ ಪಾಳಯದಲ್ಲಿ ಆತಂಕ.. ಈ ಮೂವರು ಆಟಗಾರರು ತಂಡಕ್ಕೆ ಹೊರೆಯಾಗಲಿದ್ದಾರೆಯೇ?



















