ಬೆಂಗಳೂರು: 76ನೇ ಸಾಲಿನ ಗಣರಾಜ್ಯೋತ್ಸವ ಆಚರಣೆಗೆ ಸಿಲಿಕಾನ್ ಸಿಟಿ ಸಕಲ ಸಿದ್ಧತೆ ಮಾಡಿಕೊಂಡಿದೆ.
ಸಿದ್ಧತೆಯ ಕುರಿತು ಜಂಟಿ ಸುದ್ದಿಗೋಷ್ಠಿಯಲ್ಲಿ ಪೊಲೀಸರ್ ಕಮಿಷನರ್ ದಯಾನಂದ್ ಹಾಗೂ ಬಿಬಿಎಂಪಿ ಮಾಹಿತಿ ನೀಡಿತು, ಈ ಬಾರಿ ಗಣರಾಜ್ಯೋತ್ಸವ ಆಚರಣೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜ. 26ರಂದು ಬೆಳಗ್ಗೆ 9ಕ್ಕೆ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಲಿದ್ದಾರೆ ಎದಿದ್ದಾರೆ.
ಈ ಬಾರಿ ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಯಾವುದೇ ಸಮಸ್ಯೆಯಾಗದಂತೆ ರಾಜ್ಯೋತ್ಸವ ಆಚರಣೆಗೆ ಸಿದ್ಧವಾಗಿದೆ . ನಗರದ ಎಲ್ಲ ವಿಭಾಗಗಳಿಂದ ಪೊಲೀಸ್ ಭದ್ರತೆ ಒದಗಿಸಲಾಗುತ್ತದೆ. 8-ಡಿಸಿಪಿ, 17 ಎಸಿಪಿ, 44 ಪಿಐ, 114 ಪಿಎಸ್ ಐ, 58 ಎಎಸ್ಐ,80 ಮಹಿಳಾ ಸಿಬ್ಬಂದಿ, 30 ಜನ ಕ್ಯಾಮೆರಾ ಸಿಬ್ಬಂದಿ ಸೇರಿದಂತೆ ಒಟ್ಟು 1051 ಜನ ಅಧಿಕಾರಿಗಳು, ಸಿಬ್ಬಂದಿ ಭಾಗಿಯಾಗಲಿದ್ದಾರೆ.
ಬಂದೋಬಸ್ತ್ ಗೆ 10 KSRP ತುಕಡಿ, 2 ಅಗ್ನಿಶಾಮಕ ವಾಹನ, ಕ್ಷಿಪ್ರ ಕಾರ್ಯಾಚರಣೆ ತಂಡ ತಯಾರಿಯಲ್ಲಿದೆ. ಮೈದಾನದ ಸುತ್ತ 103 ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದೆ. ಕಲರ್ ಕೋಡ್ ಗಳ ಮೂಲಕ ಪಾಸ್ ವಿತರಿಸಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಪಿಂಕ್ ಬಣ್ಣದ ಪಾಸ್, ವಿಐಪಿ ಪಾಸ್ ಗೇಟ್ 2 ಪಾಸ ನೀಡಲಾಗುವುದು. ಮುಖ್ಯ ಅತಿಥಿ, ಗಣ್ಯರಿಗೆ ಗೇಟ್-3 ಪ್ರವೇಶ, ಗೇಟ್-4 ರಲ್ಲಿ ಬಿಳಿ ಪಾಸ್, ಮಾಧ್ಯಮ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ.
ಈ ಬಾರಿ 38 ತುಕಡಿಗಳಿಂದ ಪಥ ಸಂಚಲನ ನಡೆಯಲಿದೆ. ಪೊಲೀಸ್, ಕೇರಳ ಪೊಲೀಸ್, ಸ್ಕೌಟ್ಸ್ ಗೈಡ್ಸ್, ಬ್ಯಾಂಡ್, ವಿದ್ಯಾರ್ಥಿಗಳ ತಂಡ ಸೇರಿದಂತೆ 1150 ಜನರು ಭಾಗಿಯಾಗಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 1500 ವಿದ್ಯಾರ್ಥಿಗಳು ಭಾಗಿಯಾಗಲಿದ್ದಾರೆ ಪೊಲೀಸ್ ಕಮಿಷನರ್ ದಯಾನಂದ್ ಹೇಳಿದ್ದಾರೆ.