ಬೆಂಗಳೂರು: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಖಾಸಗಿ ಅಂಗ ತೋರಿಸಿ ಯುವಕನೊಬ್ಬ ವಿಕೃತಿ ಮೆರೆದಿರುವ ಘಟನೆಯೊಂದು ನಡೆದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮುಕನೊಬ್ಬನನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ಯಾಸೀನ್ ಎಸ್ ಬಂಧಿತ ಆರೋಪಿ. ಕಾಮುಕ ಯಾಸೀನ್ ಹಲವು ದಿನಗಳಿಂದ ಯುವತಿಯ ಹಿಂದೆ ಬಿದ್ದಿದ್ದ ಎನ್ನಲಾಗಿದೆ.
ಈತ ತಿಲಕ್ ನಗರದಲ್ಲಿ ತರಕಾರಿ ವ್ಯಾಪರ ಮಾಡಿಕೊಂಡಿದ್ದ. ಹಿಂದೆ ಕೂಡ ಯುವತಿಯನ್ನು ಮಾತನಾಡಿಸಿ ಕಿರುಕುಳ ನೀಡುತ್ತಿದ್ದ. ಜ. 17ರಂದು ಸಂಜೆ ಬೈಕ್ ನಲ್ಲಿ ಬಂದು ಖಾಸಗಿ ಅಂಗ ತೋರಿಸಿ ಪರಾರಿಯಾಗಿದ್ದ. ಈ ಕುರಿತು ಯುವತಿ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತನಿಖೆ ಕೈಗೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ, ಕಾನೂನು ಕ್ರಮ ಕೈಗೊಂಡಿದ್ದಾರೆ.