ಬೆಂಗಳೂರು: ಸಿಲಿಕಾನ್ ಸಿಟಿಯ ಹೊರಗೆ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಜನ ಬೆಚ್ಚಿ ಬಿದ್ದಿದ್ದಾರೆ.
ಕನಕಪುರ (Kanakapura) ರಸ್ತೆಯ ಮಲ್ಲಸಂದ್ರ(Mallasandra) ಸುತ್ತಮುತ್ತ ಚಿರತೆ (Leopard) ಕಾಣಿಸಿಕೊಂಡಿದೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ (Forest Department) ಅಧಿಕಾರಿಗಳು ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಭಾನುವಾರ ಬೆಳಗ್ಗೆಯಿಂದ ಮತ್ತೆ ಚಿರತೆ ಸೆರೆ ಹಿಡಿಯುವ ಕಾರ್ಯಾಚರಣೆ ಮುಂದುವರೆದಿದೆ.