ಧಾರವಾಡ ಕೆಡಿಪಿ ಸಭೆಯಲ್ಲಿ ಸಚಿವ ಸಂತೋಷ್ ಲಾಡ್ ರೇಷ್ಮೆ ಇಲಾಖೆ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ರೇಷ್ಮೆ ಇಲಾಖೆ ಅಧಿಕಾರಿ ನಿನ್ನೆಯಷ್ಟೇ ಅಧಿಕಾರ ವಹಿಸಿಕೊಂಡಿದ್ದರು. ಹೀಗಾಗಿ ಧಾರವಾಡ ಜಿಪಂ ಕಚೇರಿಯಲ್ಲಿ ನಡೆದಿದ್ದ ಸಭೆಗೆ ಯಾವುದೇ ಮಾಹಿತಿ ಇಲ್ಲದೆ ಹಾಜರಾಗಿದ್ದರು. ಈ ವೇಳೆ ಒಂದಾದರೂ ಮಾಹಿತಿ ನೀಡಿ ಎಂದು ಲಾಡ್ ತರಾಟೆಗೆ ತೆಗೆದುಕೊಂಡಿದ್ದಾರೆ. ಆದರೂ ಅಧಿಕಾರಿ ಮಾಹಿತಿ ನೀಡದೆ ಸುಮ್ಮನೆ ನಿಂತಿದ್ದಾರೆ. ರೇಷ್ಮೆ ಇಲಾಖೆ ಉಪನಿರ್ದೇಶಕ ಮಹಾದೇವ ಎಂಬುವವರನ್ನು ಲಾಡ್ ತರಾಟೆಗೆ ತೆಗೆದುಕೊಂಡಿದ್ದಾರೆ.



















