ಬೆಂಗಳೂರು: ಚಂದನವನದ ಬೆಳ್ಳಿ ಪರದೆಯಲ್ಲಿ ಗತವೈಭವ ಕಥೆಯನ್ನು ಹರವಿಡಲು ಸಿಂಪಲ್ ಸುನಿ ಸಿದ್ಧವಾಗಿದ್ದಾರೆ.
ಈಗ ಸುನಿ ಭತ್ತಳಿಕೆಯಲ್ಲಿದ್ದ ಬಹು ನಿರೀಕ್ಷಿತ ಚಿತ್ರ ಗತವೈಭವ ಚಿತ್ರೀಕರಣ ಮುಕ್ತಾಯಗೊಂಡಿದೆ. ಪೋರ್ಚುಗಲ್ ಸೇರಿದಂತೆ ಬೇರೆ ಬೇರೆ ಕಡೆ ಈ ಚಿತ್ರದ ಶೂಟಿಂಗ್ ನಡೆದಿದೆ. ನಾಯಕ ದುಷ್ಯಂತ್ ಹಾಗೂ ಆಶಿಕಾ ರಂಗನಾಥ್ ಚಿತ್ರೀಕರಣ ಅನುಭವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಇದೇ ವರ್ಷದ ಅರ್ಧಭಾಗದಲ್ಲಿ ಗತವೈಭವ ಸಿನಿಮಾ ತೆರೆಗೆ ಅಪ್ಪಳಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.

ಸಿಂಪಲ್ ಸುನಿ ಎಲ್ಲಾ ಪ್ರಕಾರದ ಸಿನಿಮಾಗೂ ಕೈ ಹಾಕಿದ್ದಾರೆ. ಕಾಮಿಡಿ, ಸಿರೀಯಸ್, ಫ್ಯಾಂಟಸಿ, ಹಾರರ್ ಸೇರಿದಂತೆ ಭಿನ್ನ-ವಿಭಿನ್ನ ಕಥೆಯನ್ನು ಹೊತ್ತು ತಂದಿದ್ದಾರೆ. ಲವ್ ಸ್ಟೋರಿಯನ್ನು ಸೈಂಟಿಫಿಕ್ ಥ್ರಿಲ್ಲರ್ ಮಾದರಿಯ ಗತವೈಭವ ಚಿತ್ರದ ಮೂಲಕ ಯುವ ಪ್ರತಿಭೆ ದುಷ್ಯಂತ್ ನಾಯಕನಾಗಿ ಚಿತ್ರರಂಗಕ್ಕೆ ಮೊದಲ ಹೆಜ್ಜೆ ಇಡುತ್ತಿದ್ದಾರೆ. ನಾಯಕಿಯಾಗಿ ಆಶಿಕಾ ರಂಗನಾಥ್ ನಟಿಸಿದ್ದಾರೆ.
ಸಿಂಪಲ್ ಸುನಿ ಈ ಸಿನಿಮಾಗೆ ಕೇವಲ ನಿರ್ದೇಶಕ ಅಷ್ಟೇ ಅಲ್ಲ. ಅವರು ನಿರ್ಮಾಪಕ ಕೂಡ ಹೌದು.’ಗತವೈಭವ’ ಸಿನಿಮಾಕ್ಕೆ ಕಥೆ-ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದು, ಸುನಿ ಸಿನಿಮಾಸ್ ಸಂಸ್ಥೆಯಡಿ ದೀಪಿಕ್ ರವರ ಮಾತಾ ಮೂವಿ ಮೇಕರ್ಸ್ ಹಾಗೂ ಸುನಿ ಚಿತ್ರ ನಿರ್ಮಾಣ ಮಾಡುತ್ತಿದ್ದು, ವಿಲಿಯಂ ಡೇವಿಡ್ ಕ್ಯಾಮೆರಾ ವರ್ಕ್, ಜೂಡಾ ಸ್ಯಾಂಡಿ ಸಂಗೀತ ಚಿತ್ರಕ್ಕಿದೆ.
ಗತವೈಭವ ಚಿತ್ರದ ಚಿತ್ರೀಕರಣ ಕೂರ್ಗ್, ಮಂಗಳೂರು, ಪೋರ್ಚುಗಲ್ ನಲ್ಲಿ ನಡೆದಿದೆ. 100 ಕಾಲ್ ಶೀಟ್ ಗಳಲ್ಲಿ ಶೂಟಿಂಗ್ ಮುಕ್ತಾಯಗೊಂಡಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿವೆ.