ಬೆಂಗಳೂರು: ರಾಜ್ಯದ ವಿಜಯಪುರದಲ್ಲಿರುವ ಸಿಂದಗಿ ಅರ್ಬನ್ ಬ್ಯಾಂಕಿನಲ್ಲಿ ಖಾಲಿ ಇರುವ 10 ಹುದ್ದೆಗಳ ನೇಮಕಾತಿಗಾಗಿ (Sindgi Urban Bank Recruitment 2025) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ಯೂನ್ ಹಾಗೂ ಜೂನಿಯರ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಸಿಂದಗಿ ಅರ್ಬನ್ ಬ್ಯಾಂಕ್
ಹುದ್ದೆಗಳ ಹೆಸರು: ಪ್ಯೂನ್ ಹಾಗೂ ಜೂನಿಯರ್ ಅಸಿಸ್ಟಂಟ್
ಒಟ್ಟು ಹುದ್ದೆಗಳು: 10
ಉದ್ಯೋಗ ಸ್ಥಳ: ವಿಜಯಪುರ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಡಿಸೆಂಬರ್ 20
ಆರು ಜೂನಿಯರ್ ಅಸಿಸ್ಟಂಟ್ ಹಾಗೂ ನಾಲ್ಕು ಪ್ಯೂನ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪದವಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 19,950 ರೂ.ನಿಂದ 52,650 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಕನಿಷ್ಠ 18ರಿಂದ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ sindgiurbanbank.com ಗೆ ಭೇಟಿ ನೀಡಬೇಕು
- ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
- ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
- ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
_ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು - ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು
ಇದನ್ನೂ ಓದಿ ; ರಾಜ್ಯ ಸರ್ಕಾರದ KEONICSನಲ್ಲಿ ಕನ್ಸಲ್ಟಂಟ್ ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ



















