ಬೆಂಗಳೂರು: ಒಡಿಶಾದ ರ‍್ಯಾಪರ್ ಅಭಿನವ್ ಸಿಂಗ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಈ ಘಟನೆ ಇಲ್ಲಿಯ ಕಾಡುಬೀಸನಹಳ್ಳಿಯ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ. ಪತ್ನಿಯ ಕಿರುಕುಳಕ್ಕೆ ಬೇಸತ್ತು ಅಭಿನವ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ವೃತ್ತಿಯಲ್ಲಿ ಇಂಜಿನಿಯರ್ ಆಗಿದ್ದ ಒಡಿಶಾ ಮೂಲದ ರ‍್ಯಾಪರ್ ಅಭಿನವ್ ಸಿಂಗ್, ಬೆಂಗಳೂರಿನ ಕಾಡುಬೀಸನಹಳ್ಳಿಯ ಅಪಾರ್ಟ್ ಮೆಂಟ್ ನಲ್ಲಿ ವಾಸಿಸುತ್ತಿದ್ದರು. ಆದರೆ, ಇಂದು ಏಕಾಏಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದಕ್ಕೆ ಪತ್ನಿಯೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತು ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.