ಕಿರುತೆರೆಯ ಜನಪ್ರಿಯ ಶೋ ಸರಿಗಮಪದಲ್ಲಿ ಗಾಯಕಿಯಾಗಿ ಪರಿಚಿತಗೊಂಡ ಪ್ರತಿಭೆ ಸುಹಾನಾ ಸೈಯದ್. ತಮ್ಮ 16 ವರ್ಷಗಳ ಸ್ನೇಹಿತ, ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಅವರನ್ನು ವಿವಾಹವಾಗಲಿದ್ದಾರೆ.
ಈ ಜೋಡಿ ಕುವೆಂಪು ಅವರ ಮಂತ್ರ ಮಾಂಗಲ್ಯದ ಆಶಯದಂತೆ ಸರಳವಾಗಿ ಅಂತರ್ ಧರ್ಮೀಯ ವಿವಾಹವಾಗುತ್ತಿದ್ದಾರೆ.
ವಿವಾಹವೂ ಸರಳವಾಗಿದ್ದು, ಕಾರ್ಯಕ್ರಮದಲ್ಲಿ ಆಪ್ತ ವರ್ಗದವರಷ್ಟೇ ಪಾಲ್ಗೊಳ್ಳುತ್ತಿದ್ದಾರೆ. ರಂಗಭೂಮಿ ಕಲಾವಿದ ನಿತಿನ್ ಜೊತೆ ಸುಹಾನಾ ಹೊಸ ಮನ್ವಂತರಕ್ಕೆ ಹೆಜ್ಜೆ ಇಡುತ್ತಿದ್ದಾರೆ. ಮದುವೆಗೂ ಮುನ್ನ ಭಾವಿ ಪತಿ ಜೊತೆ ಫೋಟೋಗೆ ಫೋಸ್ ಕೊಡುವಾಗ ಫೋಟೋಗಳು ರಿವೀಲ್ ಆಗಿದೆ.