ದಾವಣಗೆರೆ: ಅತ್ಯಾಚಾರಕ್ಕೆ ಯತ್ನಿಸಿದ್ದ ವೇಳೆ ಪ್ರತಿರೋಧ ವ್ಯಕ್ತಪಡಿಸಿದ ನವವಿವಾಹಿತೆಗೆ ಪಾಪಿಯು ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ ನಡೆದಿದೆ.
ಈ ಘಟನೆ ಜಗಳೂರು (Jagaluru) ತಾಲೂಕಿನ ಚಿಕ್ಕಮ್ಮನಹಟ್ಟಿ ಗ್ರಾಮದ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ಮಹಿಳೆಯನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ (Davangere District Hospital) ದಾಖಲಿಸಲಾಗಿದೆ. ಕಾಟಪ್ಪ (30) ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ. ಸದ್ಯ ಆರೋಪಿಯನ್ನು ಹಿಡಿದು ಥಳಿಸಿದ ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.
ಮಹಿಳೆಯ ಮದುವೆ ಇತ್ತೀಚೆಗಷ್ಟೇ ನಡೆದಿತ್ತು. ಅವರು ಎರಡು ದಿನಗಳ ಹಿಂದೆಯಷ್ಟೇ ತವರು ಮನೆಗೆ ಬಂದಿದ್ದರು. ಮಹಿಳೆಯ ಪಕ್ಕದ ಮನೆಯಲ್ಲೇ ಆರೋಪಿ ಕಾಟಪ್ಪ ವಾಸವಾಗಿದ್ದ. ಆದರೆ, ಜೂನ್ 21ರಂದು ರಾತ್ರಿ ವೇಳೆ ಮನೆಗೆ ನುಗ್ಗಿದ್ದ ಕಾಟಪ್ಪ, ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಇದಕ್ಕೆ ಮಹಿಳೆ ವಿರೋಧ ವ್ಯಕ್ತಪಡಿಸಿದ್ದಾರೆ.
ಮಹಿಳೆಯ ಕಿರುಚಾಟ ಕೇಳಿ ಅಕ್ಕ-ಪಕ್ಕದ ಜನರು ಮಹಿಳೆ ಮನೆಯ ಬಳಿ ಬಂದಿದ್ದಾರೆ. ಈ ವೇಳೆ ಮಹಿಳೆಯ ಕುತ್ತಿಗೆ ಸೇರಿದಂತೆ ಎರಡ್ಮೂರು ಕಡೆ ಇರಿದಿದ್ದಾನೆ. ಕೂಡಲೆ ಗ್ರಾಮಸ್ಥರನ್ನು ಆತನನ್ನು ಹಿಡಿದಿದ್ದಾರೆ. ನಂತರ ಆರೋಪಿಯನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಈತ ಮಹಿಳೆಯ ಮೇಲೆ ಎರಡ್ಮೂರು ಬಾರಿ ಅತ್ಯಾಚಾರಕ್ಕೆ ಯತ್ನಿಸಿದ್ದ ಎಂಬುವುದಾಗಿ ತಿಳಿದು ಬಂದಿದೆ.