ರಾಯಚೂರು : ಜಿಲ್ಲೆಯ ಸಿರವಾರ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಈ-ಖಾತೆ ಮಾಡಲು ರಾಘವೇಂದ್ರ ರೆಡ್ಡಿ ಎಂಬವರಿಂದ ಅಧಿಕಾರಿ ಸುರೇಶ್ ಶೆಟ್ಟಿ 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಅಡ್ವಾನ್ಸ್ ಆಗಿ 1 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಹಣ ತೆಗೆದುಕೊಳ್ಳುವಾಗ ಲೋಕಾಯುಕ್ತರು ಬರುತ್ತಿದ್ದಂತೆ ಎಸ್ಕೇಪ್ ಆಗಲು ನೋಡಿದ್ದ ಸುರೇಶ್ ಶೆಟ್ಟಿ, ಸಿರವಾರದಿಂದ ಕವಿತಾಳ ಪಟ್ಟಣದ ಕಡೆಗೆ ಪರಾರಿಯಾಗಲು ಪ್ರಯತ್ನಿಸಿದ್ದರು. ಈ ವೇಳೆ ಸಿನಿಮೀಯ ರೀತಿ ಕಾರಿನಲ್ಲಿ ಚೇಸ್ ಮಾಡಿ ಲೋಕಾಯುಕ್ತ ಪೊಲೀಸರು ಹಿಡಿದಿದ್ದಾರೆ.
ಸದ್ಯ ಕವಿತಾಳ ಪ್ರವಾಸಿ ಮಂದಿರದಲ್ಲಿ ಅಧಿಕಾರಿಯ ವಿಚಾರಣೆ ಹಾಗೂ ಪಂಚನಾಮೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್‌ಪಿ ಸಿದ್ದರಾಜು ನೇತೃತ್ವದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ರವಿ ಪುರುಷೋತ್ತಮ್, ಸಿಬ್ಬಂದಿ ವಿಜಯಕುಮಾರ್, ಅಮರೇಶ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ಇದನ್ನೂ ಓದಿ : ಗಣಂಗೂರು ಟೋಲ್‌ನಲ್ಲಿ ಸಿಬ್ಬಂದಿಗಳ ಅಟ್ಟಹಾಸ.. ಫಾಸ್ಟ್‌ಟ್ಯಾಗ್‌ನಲ್ಲಿ ಹಣವಿಲ್ಲದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ!


















