ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ಕಲಬುರಗಿಯಲ್ಲಿರುವ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (SJICR Recruitment 2026)ಯಲ್ಲಿ ಖಾಲಿ ಇರುವ 40 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 40 ಅಸಿಸ್ಟಂಟ್ ಪ್ರೊಫೆಸರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ
ಒಟ್ಟು ಹುದ್ದೆಗಳು: 40
ಹುದ್ದೆಗಳ ಹೆಸರು: ಅಸಿಸ್ಟಂಟ್ ಪ್ರೊಫೆಸರ್
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜೂನ್ 25
ಬೆಂಗಳೂರು ಹಾಗೂ ಕಲಬುರಗಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದು. 34 ಅಸಿಸ್ಟಂಟ್ ಪ್ರೊಫೆಸರ್, 5 ಅಸೋಸಿಯೇಟ್ ಪ್ರೊಫೆಸರ್ ಹಾಗೂ 1 ಪ್ರೊಫೆಸರ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಂಡಿ, ಡಿಎಂ ಕೋರ್ಸ್ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಗರಿಷ್ಠ 50 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 2.18 ಲಕ್ಷ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 2,500 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಉಳಿದವರಿಗೆ4 ಸಾವಿರ ರೂಪಾಯಿ ಅರ್ಜಿ ಶುಲ್ಕವಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು jayadevacardiology.com ವೆಬ್ ಸೈಟ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದು.
ಅರ್ಜಿ ಕಳುಹಿಸಬೇಕಾದ ವಿಳಾಸ
ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಬನ್ನೇರುಘಟ್ಟ ರಸ್ತೆ, ಬೆಂಗಳೂರು-560069
ಇದನ್ನೂ ಓದಿ : ಮಹಾನಗರ ಪಾಲಿಕೆಯಲ್ಲಿ 118 ಪೌರ ಕಾರ್ಮಿಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ



















