ಬೆಂಗಳೂರು : ನಗರದದಲ್ಲಿ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಅಸ್ಥಿಪಂಜರ ಪತ್ತೆಯಾಗಿದೆ. ಕೊತ್ತನೂರು ಬಳಿಯ ಅಪಾರ್ಟ್ಮೆಂಟ್ನಲ್ಲಿ ಅಸ್ಥಿಪಂಜರ ಪತ್ತೆಯಾಗಿದ್ದು, ಇದು ಸುಮಾರು 6 ರಿಂದ 8 ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯದ್ದು ಎನ್ನಲಾಗಿದೆ.
ನಿನ್ನೆ ಸಂಜೆ ಕಟ್ಟಡ ಕಾರ್ಮಿಕರ ಕಣ್ಣಿಗೆ ಈ ಅಸ್ಥಿಪಂಜರ ಬಿದ್ದಿದ್ದು, ತಕ್ಷಣ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಮೊದಲಿಗೆ ಅಪಾರ್ಟ್ಮೆಂಟ್ ಸೆಕ್ಯುರಿಟಿ ಗಾರ್ಡ್ ಈ ಅಸ್ಥಿಪಂಜರ ನೋಡಿದ್ದಾರೆ. ಪ್ಯಾಂಟ್ ಹಾಗೂ ಶರ್ಟ್ ಧರಿಸಿ ಮಲಗಿದ್ದ ಸ್ಥಿತಿಯಲ್ಲಿ ಅಸ್ಥಿಪಂಜರ ಪತ್ತೆಯಾಗಿದೆ.
ಇನ್ನು ಅಸ್ಥಿಪಂಜರ ಸ್ಥಳದಲ್ಲೆ ಇದ್ದು, ಮೇಲ್ನೋಟಕ್ಕೆ ಇದು ಸುಮಾರು 35 ರಿಂದ 40 ವರ್ಷ ವಯಸ್ಸಿನ ಗಂಡಸಿನ ಮೃತದೇಹ ಎನ್ನುವುದು ಬೆಳಕಿಗೆ ಬಂದಿದೆ. ಸದ್ಯ ಘಟನಾ ಸ್ಥಳಕ್ಕೆ ಕೊತ್ತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಅಸ್ಥಿಪಂಜರ ಎಫ್ ಎಸ್ ಎಲ್ ಗೆ ರವಾನೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ದೊಡ್ಡಗುಬ್ಬಿಯ ಶ್ರೀಧರ್ ಎಂಬುವವರಿಗೆ ಸೇರಿದ ಅಪಾರ್ಟ್ಮೆಂಟ್ ಎಂದು ತಿಳಿದುಬಂದಿದೆ.