ಜೈಪುರ : ಜೈಪುರ-ದೆಹಲಿ ಹೈವೇಯಲ್ಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಸ್ಲೀಪರ್ ಬಸ್ ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುಮಾರು 12ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ನಗರದ ಮನೋಹರ್‌ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಟೋಡಿ ಗ್ರಾಮದಲ್ಲಿರುವ ಇಟ್ಟಿಗೆ ಗೂಡಿಗೆ ಕಾರ್ಮಿಕರನ್ನು ಸಾಗಿಸುತ್ತಿದ್ದ ಬಸ್ಸಿಗೆ ವಿದ್ಯುತ್ ತಂತಿ ತಗುಲಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ, ದಾರಿಹೋಕರು ಮತ್ತು ಸ್ಥಳೀಯರು ಸಹಾಯಕ್ಕೆ ಧಾವಿಸಿದ್ದರು, ಅಗ್ನಿಶಾಮಕ ದಳದವರು ಸ್ಥಳಕ್ಕೆ ತಲುಪುವ ಮೊದಲೇ ಹಲವಾರು ಪ್ರಯಾಣಿಕರು ಬಸ್‌ನಿಂದ ಹೊರ ಬಂದಿದ್ದರು. ಬಳಿಕ ಗಾಯಾಳುಗಳನ್ನು ಶಹಪುರ ಉಪ-ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಇದನ್ನೂ ಓದಿ : ಇಂದು ರಾತ್ರಿ ಆಂಧ್ರ ಕರಾವಳಿಗೆ ಅಪ್ಪಳಿಸಲಿದೆ ಮೋಂಥಾ ಚಂಡಮಾರುತ: ಆಂಧ್ರ, ಒಡಿಶಾದಲ್ಲಿ ಭಾರೀ ಮಳೆ, ರೆಡ್ ಅಲರ್ಟ್



















