ಬೆಂಗಳೂರು: ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರ ನಿಧನರಾಗಿದ್ದು, ಗಣ್ಯರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.
ಸದಾಶಿವನಗರದಲ್ಲಿರುವ ಕೃಷ್ಣ ಅವರ ನಿವಾಸದಲ್ಲಿ ಮಾಜಿ ಸಂಸದೆ ಸುಮಲತಾ ಅಂಬರೀಶ್, ನಟ ಶಿವ ರಾಜ್‌ಕುಮಾರ್, ಲಹರಿ ಸಂಸ್ಥೆಯ ಮುಖ್ಯಸ್ಥ ವೇಲು, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ನಿರ್ಮಾಪಕ ಚಿನ್ನೇಗೌಡ, ತೇಜಸ್ವಿನಿ ಅನಂತಕುಮಾರ್, ಮಾಜಿ ಸಚಿವ ಅರವಿಂದ್ ಲಿಂಬಾವಳಿ ಸೇರಿದಂತೆ ಹಲವರು ಅಂತಿಮ ದರ್ಶನ ಪಡೆದರು.
ಅಂತಿಮ ದರ್ಶನ ಪಡೆದ ಮಾಜಿ ಸಂಸದೆ ಸುಮಲತಾ, ಎಸ್.ಎಂ. ಕೃಷ್ಣ ಅವರು ನನ್ನ ರಾಜಕೀಯ ಗುರುಗಳು ಹಾಗೂ ಮಾರ್ಗದರ್ಶಕರು. ಅವರ ಮಾರ್ಗದರ್ಶನದ ಮೂಲಕವೇ ನಾನು ರಾಜಕೀಯ ಪ್ರವೇಶಿಸಿದೆ. ರಾಜ್ಯ ಕಂಡ ಅತ್ಯಂತ ಶ್ರೇಷ್ಠ ಹಾಗೂ ಧೀಮಂತ ರಾಜಕಾರಣಿ ಎಂದು ಹೇಳಿದರು.