ಮಂಡ್ಯ: ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರು ಇಹಲೋಕ ತ್ಯಜಿಸಿದ್ದು, ಮೂರು ದಿನಗಳ ಶೋಕಾಚಾರಣೆಯನ್ನು ಸರ್ಕಾರ ಘೋಷಿಸಿದೆ.
ನಾಳೆ ಮಂಡ್ಯ ಜಿಲ್ಲೆಯ ಸೋಮನಹಳ್ಳಿಯಲ್ಲಿ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ಸಕಲ ಸರ್ಕಾರಿ ಗೌರವದೊಂದಿಗೆ ನಡೆಯಲಿದೆ. ಇದಕ್ಕಾಗಿ ತಯಾರಿ ನಡೆದಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಳಗ್ಗೆ 8 ಗಂಟೆಯವರೆಗೆ ಸದಾಶಿವನಗರದಲ್ಲಿರುವ ಕೃಷ್ಣ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. 8 ಗಂಟೆಗೆ ಮೃತದೇಹವನ್ನು ವಾಹನದ ಮೂಲಕ ಸೋಮನಹಳ್ಳಿಗೆ ತರಲಾಗುತ್ತದೆ.
ಕೆಂಗೇರಿ, ಬಿಡದಿ, ರಾಮನಗರ ಮತ್ತು ಚನ್ನಪಟ್ಟಣದ ಒಂದೊಂದು ಕಡೆ ಐದೈದು ನಿಮಿಷ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಹೀಗಾಗಿ ಜನರು ಮಧ್ಯಾಹ್ನ 3ರ ವರೆಗೆ ಅಂತಿಮ ದರ್ಶನ ಪಡೆಯಬಹುದು. ನಂತರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.
ಸಿಎಂ ಸಿದ್ದರಾಮಯ್ಯ, ಎಲ್ಲ ಸಚಿವರು ಮತ್ತು ಪಕ್ಷದ ಎಲ್ಲಾ ಶಾಸಕರು ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲಿದ್ದಾರೆ ಎಂದಿದ್ದಾರೆ