ಮಹಿಳಾ ತಂಡದ ಅನುಭವಿ ಬ್ಯಾಟ್ಸ್ ಮನ್ ಸ್ಮೃತಿ ಮಂಧಾನ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭರ್ಜರಿ ಅರ್ಧ ಶತಕ ಸಿಡಿಸಿ ಮಿಂಚಿದ್ದಾರೆ.
ಹ್ಯಾಟ್ರಿಕ್ ಅರ್ಧ ಶತಕ ಸಿಡಿಸುವುದರ ಮೂಲಕ ಮಿಥಾಲಿ ರಾಜ್ ನಂತರ ಸತತ 3 ಅರ್ಧಶತಕಗಳನ್ನು ಗಳಿಸಿದ ಎರಡನೇ ಭಾರತೀಯ ಮಹಿಳಾ ಆಟಗಾರ್ತಿ ಎಂಬ ದಾಖಲೆ ಬರೆದಿದ್ದಾರೆ. ವಿಂಡೀಸ್ ವಿರುದ್ಧದ ಎರಡನೇ ಪಂದ್ಯದಲ್ಲಿ ಸ್ಮೃತಿ ಅರ್ಧಶತಕ ಬಾರಿಸಿದ್ದರು. ಇದು 29ನೇ ಅರ್ಧಶತಕವಾಗಿದೆ.
ಅಲ್ಲದೇ, ಟಿ20 ಕ್ರಿಕೆಟ್ನಲ್ಲಿ ಅತಿ ಹೆಚ್ಚು ಅರ್ಧಶತಕಗಳನ್ನು ಗಳಿಸಿದ ಬ್ಯಾಟರ್ ಗಳ ಪಟ್ಟಿಯಲ್ಲಿ ನ್ಯೂಜಿಲೆಂಡ್‌ನ ಆಲ್ ರೌಂಡರ್ ಸುಜಿ ಬೇಟ್ಸ್ ಅವರ ಅರ್ಧಶತಕಗಳ ದಾಖಲೆ ಸರಿಗಟ್ಟಿದ್ದಾರೆ. ಮೂರನೇ ಟಿ20 ಪಂದ್ಯದಲ್ಲಿ ಕೇವಲ 27 ಎಸೆತಗಳಲ್ಲಿ ಅರ್ಧಶತಕ ದಾಖಲಿಸಿದ ಸ್ಮೃತಿಗೆ ಇದು ಅವರ 30ನೇ ಟಿ20 ಅರ್ಧಶತಕವಾಗಿದೆ. ಈ ಮೂಲಕ ಸ್ಮೃತಿ ಅಂತರಾಷ್ಟ್ರೀಯ ಟಿ20 ಕ್ರಿಕೆಟ್ನಲ್ಲಿ ಅತಿ ಹೆಚ್ಚು ಅರ್ಧಶತಕಗಳನ್ನು ಬಾರಿಸಿರುವ ಮೊದಲ ಮಹಿಳಾ ಕ್ರಿಕೆಟರ್ ಎಂಬ ವಿಶ್ವದಾಖಲೆ ಬರೆದಿದ್ದಾರೆ.