ಬೆಂಗಳೂರು: ಚಾಮುಂಡೇಶ್ವರಿ ತಾಯಿಯ ಸೀರೆಯನ್ನು ಅಧಿಕಾರಿಗಳು ಮಾರಿಕೊಳ್ಳುತ್ತಿದ್ದಾರೆ ಎಂದು ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಮುಡಾ ಹಗರಣದ (Muda Scam) ಪ್ರಮುಖ ದೂರುದಾರರಾಗಿರುವ ಸ್ನೇಹಮಯಿ ಕೃಷ್ಣ (Snehamayi Krishna) ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಸೀರೆ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ದೂರು ಸಲ್ಲಿಸಿದ್ದರು. ಹೀಗಾಗಿ ಎಫ್ ಐಆರ್ ದಾಖಲಾಗಿತ್ತು. ಇದರ ಬೆನ್ನಲ್ಲೇ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
ಪೊಲೀಸರು ಇದೀಗ ಸ್ನೇಹಮಯಿ ಕೃಷ್ಣಗಾಗಿ ಹುಡುಕಾಟ ಆರಂಭಿಸಿದ್ದಾರೆ. ಅವರ ಮೊಬೈಲ್ ಮೂರು ದಿನಗಳಿಂದ ಸ್ವಿಚ್ ಆಫ್ ಆಗಿದೆ ಎಂದು ತಿಳಿದು ಬಂದಿದೆ.