ಬೆಂಗಳೂರು : ನೀವು ವಿಜಯಪುರ ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ವಿಜಯಪುರದಲ್ಲಿರುವ ಸರ್ಕಾರಿ ನೌಕರರ ಸಹಕಾರಿ ಬ್ಯಾಂಕಿನಲ್ಲಿ ಖಾಲಿ ಇರುವ 18 ಹುದ್ದೆಗಳ ನೇಮಕಾತಿಗಾಗಿ (SNS Bank Vijayapura Recruitment 2026) ಅಧಿಸೂಚನೆ ಹೊರಡಿಸಲಾಗಿದೆ. 18 ಜೂನಿಯರ್ ಅಸಿಸ್ಟಂಟ್ ಸೇರಿ ಹಲವು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಸರ್ಕಾರಿ ನೌಕರರ ಸಹಕಾರಿ ಬ್ಯಾಂಕ್
ಒಟ್ಟು ಹುದ್ದೆಗಳು: 18
ಹುದ್ದೆಗಳ ಹೆಸರು: ಜೂನಿಯರ್ ಅಸಿಸ್ಟಂಟ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 28
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
12 ಜೂನಿಯರ್ ಅಸಿಸ್ಟಂಟ್ ಹಾಗೂ 6 ಗಾರ್ಡ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಎಸ್ಸೆಸ್ಸೆಲ್ಸಿ, ಪದವಿ ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ನಂತರ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 83,700 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ.
ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ snsbankvijayapur.com ಗೆ ಭೇಟಿ ನೀಡಿ
ನಿಮಗೆ ಬೇಕಾದ ಹುದ್ದೆಗಳ ಅಧಿಸೂಚನೆ ಓದಿ
ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
ಕೊನೆಯ ದಿನಾಂಕಕ್ಕೂ ಮೊದಲು ಅರ್ಜಿ ನಮೂನೆಯನ್ನು ಸಲ್ಲಿಸಿ
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಂಡಿರಿ
ಇದನ್ನೂ ಓದಿ ; ಬುಮ್ರಾ ಹೊಸ ವಿಶ್ವದಾಖಲೆ ; ಅಫ್ಘಾನ್ ವಿರುದ್ಧ ಮೇಡನ್ ಓವರ್ ಎಸೆದು ಇತಿಹಾಸ ಬರೆದ ‘ಯಾರ್ಕರ್ ಕಿಂಗ್’!



















