ಬೆಳಗಾವಿ : ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸೈನಿಕರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆಯ ಆನಗೋಳ ಬಜಾರ್ ಬಳಿ ಈ ಘಟನೆ ನಡೆದಿದೆ. ನಡೆದುಕೊಂಡು ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಹಠಾತ್ ಹೃದಯಾಘಾತಕ್ಕೆ ಒಳಗಾಗಿ ಸೈನಿಕ ಇಬ್ರಾಹಿಂ ದೇವಲಾಪೂರ ಸಾವನ್ನಪ್ಪಿದ್ದಾರೆ. ಯೋಧ ಹೃದಯಾಘಾತದಿಂದ ಸಾವನ್ನಪ್ಪಿದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾರ್ಗ ಮಧ್ಯೆ ಇದ್ದ ಸ್ಥಳೀಯರು ತಕ್ಷಣ ದೌಡಾಯಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.



















