ಹಾವೇರಿ: ವ್ಯಕ್ತಿಯೊಬ್ಬ ತನ್ನ ಚಿಕ್ಕಪ್ಪನನ್ನೇ ನಡು ರಸ್ತೆಯಲ್ಲಿ ಕೊಚ್ಚಿ ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ.
ಜಮೀನಿನ ರಸ್ತೆ ನಿರ್ಮಾಣ ವಿಚಾರದಲ್ಲಿ ಗಲಾಟೆ ಮಾಡಿಕೊಂಡು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲು ಯತ್ನಿಸಿದ್ದಾನೆ. ಈ ಘಟನೆ ಹಾವೇರಿ (Haveri) ನಗರದ ಎಂ.ಜಿ ರೋಡ್ ಗಣಪತಿ ದೇವಸ್ಥಾನದ ಬಳಿ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಉಳಿವೆಪ್ಪ ಅಕ್ಕಿ(68) ಹಲ್ಲೆಗೆ ಒಳಗಾಗಿರುವ ವ್ಯಕ್ತಿ. ಉಳಿವೆಪ್ಪ ತಮ್ಮನ ಮಗ ಬಸವರಾಜ್ ಅಲಿಯಾಸ್ ಗಣೇಶ್ ಹಲ್ಲೆ ಮಾಡಿರುವ ಆರೋಪಿ ಎನ್ನಲಾಗಿದೆ. ಹಲ್ಲೆಗೊಳಗಾದ ಚಿಕ್ಕಪ್ಪ ಬೆಳಗ್ಗೆ ವಾಕಿಂಗ್ ಗೆ ಹೋಗಿದ್ದ ಸಂದರ್ಭದಲ್ಲಿ ಸ್ಕೂಟರ್‌ನಲ್ಲಿ ಬಂದ ಗಣೇಶ್ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ಸ್ಥಳೀಯರು ಚಿಕ್ಕಪ್ಪನನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಗಾಯಗೊಂಡಿರುವ ಉಳಿವೆಪ್ಪ ಹುಬ್ಬಳ್ಳಿ (Hubballi) ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.