ಕೋಲಾರ : ತಾಯಿ ನಿಧನರಾದ ಕೊರಗಿನಲ್ಲಿ ಮನನೊಂದ ಮಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ತಮ್ಮರೆಡ್ಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅಭಿಶೇಕ್ (18 ) ಆತ್ಮಹತ್ಯೆಗೆ ಶರಣಾದ ಮಗ. ತಾಯಿ ರಾಧ (39) ಅನಾರೋಗ್ಯಕ್ಕೆ ತುತ್ತಾಗಿ ಕಳೆದ 20 ದಿನಗಳ ಹಿಂದೆ ಸಾವನ್ನಪ್ಪಿದ್ದಳು. ಇದರಿಂದ ಕೊರಗುತ್ತಿದ್ದ ಮಗ ಬೆಳೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನು. ಆ ಬಳಿಕ ಕೋಲಾರದ ಖಾಸಗಿ ಆಸ್ಪತ್ರೆಯಗೆ ಕರೆದೊಯ್ಯುದು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.
ಸದ್ಯ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನನೂ ಓದಿ : ಮಂಡ್ಯ | ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯ



















