ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಸಂಜಯ್ ಬಂಗಾರ್ ಅವರ ಪುತ್ರ ಈಗ ಹುಡುಗಿಯಾಗಿ ಬದಲಾಗಿದ್ದಾನೆ. ಅಲ್ಲದೇ, ನನ್ನ ನಿರ್ಧಾರದಿಂದ ನನಗೆ ಸಂತಸ ಸಿಕ್ಕಿದೆ ಎಂದು ಅವರ ಮಗ ಹೇಳಿಕೊಂಡಿದ್ದಾನೆ.
ಸಂಜಯ್ ಬಂಗಾರ್ ಅವರ ಹಿರಿಯ ಮಗ ಆರ್ಯನ್ ಹುಡುಗಿಯಾಗಿ ಪರಿವರ್ತನೆ ಹೊಂದಿದ್ದಾನೆ. ನನ್ನ ಹೆಸರು ಇನ್ನು ಮುಂದೆ ಆರ್ಯನ್ ಅಲ್ಲ, ಬದಲಾಗಿ ಅನಯಾ ಎಂದು ಕೂಡ ಹೇಳಿದ್ದಾನೆ ಎನ್ನಲಾಗಿದೆ.
ಅನಯಾ ಕಳೆದ 10 ತಿಂಗಳಿಂದ ಹಾರ್ಮೋನ್ ಬದಲಾವಣೆಗಾಗಿ ಚಿಕಿತ್ಸೆ ಪಡೆದು, ಶಸ್ತ್ರಚಿಕಿತ್ಸೆಯ ನಂತರ ಹುಡುಗಿಯಾಗಿ ರೂಪಾಂತರಗೊಂಡಿರುವುದಾಗಿ ಅವರು ಹೇಳಿದ್ದಾರೆ. ಇದಕ್ಕಾಗಿ ಕ್ರಿಕೆಟ್ ಕರಿಯರ್ ತ್ಯಾಗ ಮಾಡಿದ್ದೇನೆ ಎಂದು ಕೂಡ ಹೇಳಿದ್ದಾರೆ.
ಆರ್ಯನ್ ಎಡಗೈ ಬ್ಯಾಟ್ಸ್‌ಮನ್ ಆಗಿ ಗುರುತಿಸಿಕೊಂಡು ಕ್ಲಬ್ ಪರ ಆಡುತ್ತಿದ್ದ. ಆದರೆ, ದೇಹದಲ್ಲಾದ ಪರಿವರ್ತನೆಯಿಂದಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಹುಡುಗಿ ಆಗಿದ್ದಾನೆ ಎನ್ನಲಾಗಿದೆ. ಸದ್ಯ ಅನಯಾ ಬಂಗಾರ್ ಇಂಗ್ಲೆಂಡ್ ನ ಮ್ಯಾಂಚೆಸ್ಟರ್ ನಲ್ಲಿ ವಾಸಿಸುತ್ತಿದ್ದು, ಸಂಪೂರ್ಣ ಹುಡುಗಿಯಾಗಿ ಬದಲಾಗಿದ್ದಾರೆ.