ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಸತ್ನಲ್ಲಿ ಮಾಡಿದ ಭಾಷಣಕ್ಕೆ ಪ್ರತಿಕ್ರಿಯಿಸಿದ್ದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ಪೂರ್ ಲೇಡಿ, ಅವರಿಗೆ ಮಾತನಾಡಲೂ ಕಷ್ಟವಾಗುತ್ತಿತ್ತು. ಬಹಳ ಸುಸ್ತಾಗಿದ್ದರು ಎಂಬ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಕೂಡಲೇ ಸೋನಿಯಾ ಗಾಂಧಿ, ರಾಷ್ಟ್ರಪತಿ ಕ್ಷಮೆ ಕೋರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದೆ. ಈಗ ಕಾಂಗ್ರೆಸ್ ಸ್ಪಷ್ಟನೆ ನೀಡಿದೆ. ಸೋನಿಯಾ ಗಾಂಧಿಯವರು ನೀಡಿದ ಹೇಳಿಕೆಯನ್ನು ತಿರಚಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಪಕ್ಷವು ರಾಷ್ಟ್ರಪತಿ ಅಥವಾ ಯಾವುದೇ ನಾಗರಿಕರನ್ನು ಎಂದಿಗೂ ಅವಮಾನಿಸುವುದಿಲ್ಲ. ಬಿಜೆಪಿಯು ಸೋನಿಯಾ ಗಾಂಧಿಯ ಹೇಳಿಕೆ ತಿರುಚಿದೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮತ್ತು ನಮ್ಮ ನಾಯಕರು ಎಂದಿಗೂ ರಾಷ್ಟ್ರಪತಿ ಅಥವಾ ಯಾವುದೇ ನಾಗರಿಕರನ್ನು ಅವಮಾನಿಸುವುದಿಲ್ಲ. ಇದು ಕಾಂಗ್ರೆಸ್ ಸಂಸ್ಕೃತಿಯಲ್ಲ. ಜನರ ದಾರಿ ತಪ್ಪಿಸುವುದಕ್ಕಾಗಿ ಬಿಜೆಪಿ ಹೇಳಿಕೆಯನ್ನು ತಿರುಚಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.