ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯನ್ನು 2-1 ಅಂತರದಿಂದ ವಶಪಡಿಸಿಕೊಂಡಿರುವ ಟೀಂ ಇಂಡಿಯಾ ಇದೀಗ ಐದು ಪಂದ್ಯಗಳ ಟಿ20 ಸರಣಿಯನ್ನು ಆಡಲು ಸಜ್ಜಾಗಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯ ಇಂದು ಕಟಕ್ನಲ್ಲಿ ನಡೆಯುತ್ತಿದೆ. ಈ ಸರಣಿಯೊಂದಿಗೆ ಪ್ರಸ್ತುತ ಟಿ20 ವಿಶ್ವಕಪ್ ಚಾಂಪಿಯನ್ ಆಗಿರುವ ಭಾರತ ತಂಡ, ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ತಮ್ಮ ಸಿದ್ಧತೆಗಳನ್ನು ಪ್ರಾರಂಭಿಸಲಿದೆ.
ಭಾರತ ತಂಡವು ವಿಶ್ವಕಪ್‌ಗೆ ಮೊದಲು 10 ಟಿ20 ಪಂದ್ಯಗಳನ್ನು ಆಡಲಿದೆ. ದಕ್ಷಿಣ ಆಫ್ರಿಕಾ ನಂತರ, ಇದು ನ್ಯೂಜಿಲೆಂಡ್ ವಿರುದ್ಧ ಐದು ಪಂದ್ಯಗಳ ಸರಣಿಯನ್ನು ಸಹ ಆಡಲಿದೆ. ಹೀಗಾಗಿ ಟಿ20 ವಿಶ್ವಕಪ್ ದೃಷ್ಟಿಯಿಂದ ಸೂರ್ಯಕುಮಾರ್ ಪಡೆಗೆ ಈ ಸರಣಿ ಪ್ರಮುಖವಾಗಿದೆ.
ಇನ್ನು ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ನಾಯಕ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡಿದ್ದಾರೆ. ಕಟಕ್ನಲ್ಲಿ ಎರಡನೇ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ ಮಾಡುವ ತಂಡಕ್ಕೆ ಇಬ್ಬನಿಯ ನೆರವು ಸಿಗುವುದರಿಂದ ಮಾರ್ಕ್ರಾಮ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಇದನ್ನೂ ಓದಿ : ವಂದೇ ಮಾತರಂ ಘೋಷಣೆ ಮಾಡ್ದೋರನ್ನ ಇಂದಿರಾ ಗಾಂಧಿ ಜೈಲಿಗೆ ಹಾಕಿದ್ರು | ಅಮಿತ್ ಶಾ



















