ಬೆಂಗಳೂರು: ಬೆಂಗಳೂರಿನಲ್ಲೇ ನೀವು ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ರೈಲ್ವೆ ಇಲಾಖೆಯ ನೈಋತ್ಯ ರೈಲ್ವೆ ವಿಭಾಗದಲ್ಲಿ (South Western Railway Recruitment 2025) ಖಾಲಿ ಇರುವ 65 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಕಚೇರಿ ಅಧೀಕ್ಷಕ ಸೇರಿ ವಿವಿಧ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ? ವಿದ್ಯಾರ್ಹತೆ ಏನು ಎಂಬುದು ಸೇರಿ ನೇಮಕಾತಿಯ ಇಡೀ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ನೈಋತ್ಯ ರೈಲ್ವೆ
ಒಟ್ಟು ಹುದ್ದೆಗಳು: 65
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ನವೆಂಬರ್ 30
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ವೆಲ್ಡರ್, ಜೆಇ, ಗೂಡ್ಸ್ ಟ್ರೇನ್ ಮ್ಯಾನೇಜರ್, ಲೋಕೊ ಇನ್ ಸ್ಟ್ರಕ್ಟರ್, ಆಫೀಸ್ ಸೂಪರಿಂಟೆಂಡೆಂಟ್ ಸೇರಿ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸುವವರು ಎಸ್ಸೆಸ್ಸೆಲ್ಸಿ, ಪಿಯುಸಿ ಹಾಗೂ ಪದವಿ ಕೋರ್ಸ್ ಗಳನ್ನು ಮುಗಿಸಿರಬೇಕು ಎಂದು ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 64 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ಅಭ್ಯರ್ಥಿಗಳು ಮೊದಲು swr.indianrailways.gov.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಭರ್ತಿ ಮಾಡಬೇಕು. ಭರ್ತಿ ಮಾಡಿದ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬೇಕು. ಇದಾದ ಬಳಿಕ ಅರ್ಜಿ ನಮೂನೆ ಹಾಗೂ ಅಗತ್ಯ ದಾಖಲೆಗಳಹಾರ್ಡ್ ಕಾಪಿಗಳನ್ನು Senior Divisional Personnel Officer, Divisional Railway Manager’s Office, Bengaluru-560023 ವಿಳಾಸಕ್ಕೆ ನಿಗದಿತ ದಿನಾಂಕದೊಳಗೆ ಪೋಸ್ಟ್ ಮಾಡಬೇಕು ಎಂದು ತಿಳಿಸಲಾಗಿದೆ.