ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳ ಮೇಲೆ ನಿರಂತರ ನಿಗಾ ಇರಿಸಲಾಗಿದ್ದು, ಸುಳ್ಳುಸುದ್ದಿ ಹರಡಿದರೆ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್, ‘ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆಗೆ ಸಂಬಂಧಿಸಿದ ಪೋಸ್ಟ್‌ಗಳಿಗಾಗಿ ಸರ್ಕಾರ ಸಾಮಾಜಿಕ ಮಾಧ್ಯಮಗಳನ್ನು ಮೇಲ್ವಿಚಾರಣೆ ಮಾಡುತ್ತಿದೆ. ಸಮಾಜದಲ್ಲಿ ಭಾವನೆಗಳನ್ನು ಕೆರಳಿಸುವ” ಪೋಸ್ಟ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.