ಬೆಂಗಳೂರು: ದೇಶದಲ್ಲಿ ಮಸಾಲೆಗಳ ಉತ್ಪಾದನೆ, ಅಭಿವೃದ್ಧಿ ಮತ್ತು ರಫ್ತನ್ನು ಪ್ರೋತ್ಸಾಹಿಸಲು ಸ್ಥಾಪಿಸಲಾದ, ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಮಸಾಲೆಗಳ ಮಂಡಳಿಯಲ್ಲಿ (Spices Board Recruitment 2026) ಖಾಲಿ ಇರುವ 4 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆಫ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಮಸಾಲೆಗಳ ಮಂಡಳಿ
ಹುದ್ದೆ ಹೆಸರು: ಕ್ಲೆರಿಕಲ್ ಅಸಿಸ್ಟಂಟ್
ಒಟ್ಟು ಹುದ್ದೆ: 4
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 9
ಅರ್ಜಿ ಸಲ್ಲಿಕೆಯ ವಿಧಾನ: ಆಫ್ ಲೈನ್
ಕೇರಳದ ಕೊಚ್ಚಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ದೇಶದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪೂರ್ಣಗೊಳಿಸಿದವರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರು ಗರಿಷ್ಠ 64 ವರ್ಷದೊಳಗಿನವರು ಆಗಿರಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 25 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಜಿ ಸಲ್ಲಿಸುವವರು ಮೊದಲಿಗೆ indianspices.com ಭೇಟಿ ನೀಡಿ ಅಧಿಸೂಚನೆ ಓದಬೇಕು. ಬಳಿಕ ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು. ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದಿಟ್ಟುಕೊಳ್ಳಬೇಕು.
ಇದನ್ನೂ ಓದಿ : ರಾಜ್ಯ ಸರ್ಕಾರದ KSCCF ಸಂಸ್ಥೆಯಲ್ಲಿ 34 ಹುದ್ದೆಗಳ ನೇಮಕಾತಿ | 52 ಸಾವಿರ ರೂಪಾಯಿ ಸ್ಯಾಲರಿ


















