ಬೆಂಗಳೂರು: ಕರ್ನಾಟಕ ಸರ್ಕಾರದ ಸಂಸ್ಥೆಯಲ್ಲಿ ಕೆಲಸ ಮಾಡಬೇಕು, ಕೈತುಂಬ ಸಂಬಳ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರಕಿದೆ. ಹೌದು, ರಾಜ್ಯ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಸ್ಪೆಷಲ್ ಆಫೀಸರ್ ಆ್ಯಂಡ್ ಕಾಂಪೊನೆಂಟ್ ಅಥಾರಿಟಿ (SPLOCA Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 4 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಸ್ಪೆಷಲ್ ಆಫೀಸರ್ ಆ್ಯಂಡ್ ಕಾಂಪೊನೆಂಟ್ ಅಥಾರಿಟಿ (SPLOCA)
ಒಟ್ಟು ಹುದ್ದೆಗಳು: 4
ಹುದ್ದೆಗಳ ಹೆಸರು: ಅಕೌಂಟ್ಸ್ ಸೂಪರಿಂಟೆಂಡೆಂಟ್ ಇತ್ಯಾದಿ
ಉದ್ಯೋಗ ಸ್ಥಳ: ಬೆಂಗಳೂರು, ಕರ್ನಾಟಕ
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅಕೌಂಟ್ಸ್ ಸೂಪರಿಂಟೆಂಡೆಂಟ್, ಡೆಪ್ಯೂಟಿ ತಹಸೀಲ್ದಾರ್, ಎಫ್ ಡಿಸಿ, ಫೈನಾನ್ಸ್ ಹಾಗೂ ಆಡಿಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳ ಮೂಲಕ ಎಂ.ಕಾಂ, ಎಂಎಸ್ಸಿ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಗರಿಷ್ಠ 65 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲಿಸಲಾಗುತ್ತದೆ. ಇದಾದ ನಂತರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 56 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿಗಳನ್ನು ಸಲ್ಲಿಸಲು ಡಿಸೆಂಬರ್ 6 ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ
Office of the Special Officer and Competent Authority (IMA & Other Company Fraud Cases), Podium Block, 3rd Floor, Visvesvaraya Tower, Bangalore-560001.
ಇದನ್ನೂ ಓದಿ: NIMHANS ಸಂಸ್ಥೆಯಲ್ಲಿ ಡೇಟಾ ಕಲೆಕ್ಟರ್ ಹುದ್ದೆಗಳ ನೇಮಕಾತಿ : ಸಂದರ್ಶನದ ದಿನಾಂಕ ಇಲ್ಲಿದೆ



















