ಬೆಂಗಳೂರು : ರಾಜ್ಯ ಸರ್ಕಾರದ ಸಂಸ್ಥೆಯಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಸಿಹಿ ಸುದ್ದಿ ದೊರೆತಿದೆ. ರಾಜ್ಯ ಸರ್ಕಾರಿ ಸ್ವಾಮ್ಯದ ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದಲ್ಲಿ (SPLOCA Recruitment 2026) ಖಾಲಿ ಇರುವ ಒಂದು ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಒಂದು ಅಕೌಂಟಂಟ್ ಹುದ್ದೆಯನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ನೇಮಕಾತಿಯ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರ
ಒಟ್ಟು ಹುದ್ದೆಗಳು: 1
ಹುದ್ದೆಯ ಹೆಸರು: ಅಕೌಂಟಂಟ್
ಅರ್ಜಿ ಸಲ್ಲಿಕೆ ವಿಧಾನ: ಆಫ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಮೇ 9
ಬೆಂಗಳೂರಿನಲ್ಲಿರುವ ವಿಶೇಷಾಧಿಕಾರಿ ಮತ್ತು ಸಕ್ಷಮ ಪ್ರಾಧಿಕಾರದ ಕಚೇರಿಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಲ್ಲಿ ಎಂ.ಕಾಂ ಮುಗಿಸಿರಬೇಕು ಎಂದು ತಿಳಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ನೇಮಕಾತಿ ಹೊಂದಿದವರಿಗೆ ಮಾಸಿಕ 55 ಸಾವಿರ ರೂಪಾಯಿಯಿಂದ 60 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು ಮೊದಲಿಗೆ sploca.org ವೆಬ್ ಸೈಟ್ ಗೆ ಭೇಟಿ ನೀಡಬೇಕು. ನೇಮಕಾತಿಗೆ ಸಂಬಂಧಿಸಿದ ಅಧಿಸೂಚನೆ ಓದಿಕೊಂಡು ಅರ್ಜಿಯ ಪ್ರಿಂಟೌಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮಾಡಬೇಕು.
ಅರ್ಜಿ ಸಲ್ಲಿಸಬೇಕಾದ ವಿಳಾಸ
ವಿಶೇಷಾಧಿಕಾರಿಗಳು ಮತ್ತು ಸಕ್ಷಮ ಪ್ರಾಧಿಕಾರ ಕಚೇರಿ
3ನೇ ಮಹಡಿ, ಪೋಡಿಯಂ ಬ್ಲಾಕ್, ವಿ.ವಿ. ಗೋಪುರ (ವಿಶ್ವೇಶ್ವರಯ್ಯ ಗೋಪುರ),
ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು-560001.
ಇದನ್ನೂ ಓದಿ : ‘ನಂದಿ ಬಿಲ್ಡರ್ಸ್’ ವಿರುದ್ದ ಕೋಟಿ ಕೋಟಿ ವಂಚನೆ ಆರೋಪ – ಮಾಲೀಕ ಬಸವರಾಜ ಸೇರಿ 10 ಮಂದಿ ಮೇಲೆ FIR



















