ಬೆಂಗಳೂರು: ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಖಾಲಿ ಇರುವ 15 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 15 ಸೆಕ್ಷನ್ ಆಫೀಸರ್ ಹುದ್ದೆಗಳನ್ನು ನೇಮಕಾತಿ (Sports Authority of India Recruitment 2026) ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಕ್ರೀಡಾ ಪ್ರಾಧಿಕಾರ
ಒಟ್ಟು ಹುದ್ದೆಗಳು: 15
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಜನವರಿ 29
ಉದ್ಯೋಗ ಸ್ಥಳ: ನವದೆಹಲಿ
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಪದವಿ ಪಡೆದವರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಠ 64 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಅನುಭವ ಹಾಗೂ ಕಾರ್ಯಕ್ಷಮತೆಯ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ http://sportsauthorityofindia.nic.in/ ಗೆ ಭೇಟಿ ನೀಡಬೇಕು
ನಿಮಗೆ ಬೇಕಾದ ಹುದ್ದೆಗಳನ್ನು ಆಯ್ಕೆ ಮಾಡಿಕೊಳ್ಳಬೇಕು
ಅರ್ಜಿ ನಮೂನೆಯನ್ನು ತಪ್ಪಿಲ್ಲದೆ ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು
ಅರ್ಜಿ ಸಲ್ಲಿಕೆಯ ಪ್ರತಿಯನ್ನು ಡೌನ್ ಲೋಡ್ ಮಾಡಿಟ್ಟುಕೊಳ್ಳಬೇಕು
ಇದನ್ನೂ ಓದಿ; ನೀವು ಯಾವುದಾದರೂ ವಿಮಾ ಪಾಲಿಸಿದಾರರೇ? ಹಾಗಾದರೆ, ಈ ಸೆಕ್ಷನ್ ಬಗ್ಗೆ ತಿಳಿಯಿರಿ



















