ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಅನುರ ಕುಮಾರ ದಿಸ್ಸನಾಯಕೆ ಆಯ್ಕೆಯಾಗಿದ್ದಾರೆ.
ಭಾನುವಾರ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ದಿಸ್ಸನಾಯಕೆ ಅವರು ಶೇ. 43.31 ರಷ್ಟು ಮತಗಳನ್ನು ಗಳಿಸುವ ಮೂಲಕ ಗೆಲುವು ಸಾಧಿಸಿದ್ದಾರೆ.
ಅನುರ ಕುಮಾರ ದಿಸ್ಸನಾಯಕೆ ನ್ಯಾಷನಲ್ ಪೀಪಲ್ಸ್ ಪವರ್ (ಎನ್ ಪಿಪಿ) ಒಕ್ಕೂಟದ ಅಭ್ಯರ್ಥಿಯಾಗಿ ಮಾರ್ಕ್ಸ್‌ವಾದಿ ಜನತಾ ವಿಮುಕ್ತಿ ಪೆರುಮೆನಾ (ಜೆವಿಪಿ) ಪಕ್ಷದಿಂದ ಸ್ಪರ್ಧಿಸಿದ್ದರು. ದಿಸ್ಸನಾಯಕೆ ಅವರ ಪ್ರತಿಸ್ಪರ್ಧಿ ಸಜಿತ ಪ್ರೇಮದಾಸ ಶೇ. 22ರಷ್ಟು ಮತಗಳನ್ನು ಪಡೆದಿದ್ದಾರೆ. ಹಾಲಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಮೂರನೇ ಸ್ಥಾನಕ್ಕೆ ಇಳಿದಿದ್ದಾರೆ.
ದೇಶದಲ್ಲಿ ಅಧ್ಯಕ್ಷರ ಆಯ್ಕೆಗಾಗಿ ಚುನಾವಣೆ ನಡೆದಿತ್ತು. 1.70 ಕೋಟಿ ಅರ್ಹ ಮತದಾರರ ಪೈಕಿ ಶೇ. 75ರಷ್ಟು ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು.