ಬೆಳಗಾವಿ : ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಾಳೆ ಶ್ರೀರಾಮ ಸೇನೆ ವತಿಯಿಂದ ಹಿಂದೂ ಮಹಿಳೆಯರಿಗೆ ತ್ರಿಶೂಲ ದೀಕ್ಷಾ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಕರೆ ನೀಡಿದ್ದಾರೆ.
ಹುಕ್ಕೇರಿ ಪಟ್ಟಣದ ಅಡವಿಸಿದ್ದೇಶ್ವರ ಮಠದಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಪ್ರಮೋದ್ ಮುತಾಲಿಕ್ ಅವರ ನೇತೃತ್ವದಲ್ಲಿ ನಡೆಯಲಿದೆ. ಹಿಂದೂ ಮಹಿಳೆಯರು, ಹೈಸ್ಕೂಲ್ ಹಾಗೂ ಕಾಲೇಜು ವಿದ್ಯಾರ್ಥಿನಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಂಘಟನೆ ತಿಳಿಸಿದೆ.
ಈ ಕಾರ್ಯಕ್ರಮವನ್ನು ಹಿಂದೂ ಮಹಿಳೆಯರ ಸ್ವರಕ್ಷಣೆಯ ಉದ್ದೇಶದಿಂದ ಆಯೋಜಿಸಲಾಗಿದೆ ಎಂದು ಶ್ರೀರಾಮ ಸೇನೆ ಹೇಳಿದೆ. ಮಹಿಳೆಯರಲ್ಲಿ ಆತ್ಮರಕ್ಷಣೆ ಕುರಿತು ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶ ಎಂದು ಸಂಘಟನೆ ತಿಳಿಸಿದೆ.
ಇದನ್ನೂ ಓದಿ : ಕಾರು ಡೀಲರ್ಗೆ ನಕಲಿ ಚಿನ್ನದ ಬಿಲ್ಲೆಗಳನ್ನು ಕೊಟ್ಟು ಲಕ್ಷ ಲಕ್ಷ ವಂಚಿಸಿದ ಖದೀಮರು – ಓರ್ವ ಅರೆಸ್ಟ್!



















